ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ ಘಟನೆ ಗಮನ ಸೆಳೆದಿದೆ.

ಹತ್ತಾರು ಕಾರುಗಳಲ್ಲಿ ಬಂದ ಬೆಂಬಲಿಗರು, ಸುನಿಲ್ ಪ್ರಯಾಣಿಸುತ್ತಿದ್ದ ಕಾರನ್ನು ಎಸ್ಕಾರ್ಟ್ ಶೈಲಿಯಲ್ಲಿ ಹಿಂಬಾಲಿಸಿಕೊಂಡು ಬಂದಿದ್ದು, ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರು ಈ ಸ್ವಾಗತದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಸಂಬಂಧಿತ ವಿಡಿಯೋವನ್ನು ಫ್ಯಾನ್ಸ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗೆ ಈ ರೀತಿಯಾಗಿ ಸಾರ್ವಜನಿಕವಾಗಿ ಸ್ವಾಗತ ನೀಡಿರುವುದು ಚರ್ಚೆಗೆ ಗ್ರಾಸವಾಗಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸಮಾಜದ ಮೌಲ್ಯಗಳ ಕುರಿತು ಪ್ರಶ್ನೆಗಳು ಎದ್ದಿವೆ.

Related News

error: Content is protected !!