ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospital ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಚಿವರಿಗೆ ತೀವ್ರ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದು, ಅವರ ಸ್ಥಿತಿ ಕಳವಳಕಾರಿಯಾಗಿದೆ. ಪ್ರಸ್ತುತ ಅವರನ್ನು ಎಕ್ಮೋ (ECMO) ಲೈಫ್ ಸಪೋರ್ಟ್‌ನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.

ಕೆಲವು ದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಅವರು ಯಶವಂತಪುರದ Manipal Hospital ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ.

ಆರಂಭದಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎರಡು ದಿನಗಳ ಹಿಂದೆ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಖ್ಯಾತ ವೈದ್ಯ ಡಾ. ವೆಂಕಟಗಿರಿ ಅವರ ನೇತೃತ್ವದ ವೈದ್ಯರ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದೆ.

ಇನ್ನೂ ಅಗತ್ಯವಿದ್ದರೆ ಶ್ವಾಸಕೋಶ ಕಸಿ ಮಾಡುವ ಸಾಧ್ಯತೆಯ ಬಗ್ಗೆ ಕೂಡ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಸದ್ಯ ಸಚಿವರ ದೇಹವು ಚಿಕಿತ್ಸೆಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎನ್ನಲಾಗಿದ್ದು, ವೈದ್ಯರು ನಿರಂತರ ನಿಗಾ ವಹಿಸಿದ್ದಾರೆ.

Related News

error: Content is protected !!