ಕರ್ನಾಟಕ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಹೊಸ ತಿರುವು ಪಡೆದುಕೊಂಡಿದೆ. “ಐದು ವರ್ಷವೂ ನಾನೇ ಸಿಎಂ” ಎಂದು ಸ್ಪಷ್ಟ ಸಂದೇಶ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕೊನೆಗೂ ಹೈಕಮಾಂಡ್ ಒತ್ತಡಕ್ಕೆ ಮಣಿದು ರಾಜೀನಾಮೆಗೆ ಸಮ್ಮತಿಸಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿವೆ. ಈ ಬೆಳವಣಿಗೆಯ ಹಿಂದೆ ಡಿಕೆ ಶಿವಕುಮಾರ್ ಮಾತ್ರವಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತಂತ್ರವೇ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಖರ್ಗೆ ರೂಪಿಸಿದ್ರಾ ಸಿಎಂ ಬದಲಾವಣೆಯ ರಣತಂತ್ರ?

ರಾಜ್ಯ ರಾಜಕೀಯದಲ್ಲಿ ತಮ್ಮ ಪುತ್ರ ಪ್ರಿಯಾಂಕ್ ಖರ್ಗೆ ಅವರ ಭವಿಷ್ಯವನ್ನು ಭದ್ರಗೊಳಿಸುವ ಉದ್ದೇಶದಿಂದಲೇ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಬದಲಾವಣೆಯ ಗೇಮ್ ಪ್ಲಾನ್ ರೂಪಿಸಿದ್ದಾರೆ ಎನ್ನುವ ಚರ್ಚೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಡಿಕೆ ಶಿವಕುಮಾರ್ ಅವರನ್ನು ಸಿಎಂ ಸ್ಥಾನಕ್ಕೇರಿಸಲು ಖರ್ಗೆ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದೆ.

ಡಿಕೆಶಿ ಸರ್ಕಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ?

ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಖರ್ಗೆ ಅವರು ಡಿಕೆಶಿ ಬೆಂಬಲಕ್ಕೆ ನಿಂತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಡಿಕೆಶಿ ಕೊಟ್ಟ ಭರವಸೆ ಏನು?

ಪ್ರಿಯಾಂಕ್ ಖರ್ಗೆ ಅವರನ್ನು ಮುಂದಿನ ದಿನಗಳಲ್ಲಿ ರಾಜ್ಯದ ಪ್ರಮುಖ ನಾಯಕನಾಗಿ ಬೆಳೆಸುವ ಭರವಸೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ ಎನ್ನಲಾಗಿದೆ. ಮಗನ ರಾಜಕೀಯ ಭವಿಷ್ಯ ಮತ್ತು ಅಧಿಕಾರದ ಸಮೀಕರಣ ಎರಡನ್ನೂ ಗಮನದಲ್ಲಿಟ್ಟುಕೊಂಡೇ ಖರ್ಗೆ ಅವರು ಸಿಎಂ ಬದಲಾವಣೆಗೆ ಬೆಂಬಲ ನೀಡಿದ್ದಾರೆ ಎನ್ನಲಾಗುತ್ತಿದೆ.

ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿಗೆ ಡಿಕೆಶಿ

ಹೈಕಮಾಂಡ್‌ನಿಂದ ಸಿಎಂ ಬದಲಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕ ಬೆನ್ನಲ್ಲೇ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಸಿದ್ಧರಾಗಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಒಳರಾಜಕೀಯಕ್ಕೆ ಹೊಸ ತಿರುವು

ಸಿಎಂ ಕುರ್ಚಿ ಬದಲಾವಣೆಯ ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯ ಮತ್ತಷ್ಟು ಕಾವೇರಿಸುವ ಸಾಧ್ಯತೆ ಇದೆ.

Related News

error: Content is protected !!