ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಪ್ರಕ್ರಿಯೆ ಇದೀಗ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತವಾಗಿ ಅಂಗೀಕರಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ಮೇ 28ರಂದು ಬೆಳಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದರು. ಬಳಿಕ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತ ರಾಜೀನಾಮೆ ಪತ್ರ ಸಲ್ಲಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿಶೇಷ ವಿವೇಚನಾಧಿಕಾರ ಬಳಸಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳಿಗೆ ವೇದಿಕೆ ಸಿದ್ಧವಾಗಿದೆ. ಇದೀಗ ಕಾಂಗ್ರೆಸ್ ಪಕ್ಷದ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಚರ್ಚೆಗಳು ತೀವ್ರಗೊಂಡಿವೆ.
