ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ, ಅಸ್ಲಂ ಎಂಬ ಯುವಕನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದರು ಎನ್ನಲಾಗಿದೆ. ಈ ಸಂಬಂಧದ ಬಳಿಕ ನಂದಿನಿ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿವೆ.

ಮಾಹಿತಿಗಳ ಪ್ರಕಾರ, ಅಸ್ಲಂ ಈಗಾಗಲೇ ವಿವಾಹಿತರಾಗಿದ್ದರೂ ನಂದಿನಿ ಅವರೊಂದಿಗೆ ವಾಸಿಸಲು ಆರಂಭಿಸಿದ್ದರು ಎನ್ನಲಾಗಿದೆ. ಈ ಅವಧಿಯಲ್ಲಿ ನಂದಿನಿಯ ಆಭರಣಗಳನ್ನು ಕಸಿದುಕೊಳ್ಳಲಾಗಿದೆ ಎಂಬ ಆರೋಪವೂ ವ್ಯಕ್ತವಾಗಿದೆ. ಅಲ್ಲದೆ, ನಂದಿನಿಗೆ ಬಲವಂತವಾಗಿ ಶಸ್ತ್ರಚಿಕಿತ್ಸೆ ನಡೆಸಿ ಗರ್ಭಾಶಯ ತೆಗೆದುಹಾಕಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ನಿರಂತರ ಮಾನಸಿಕ ಮತ್ತು ದೈಹಿಕ ಹಿಂಸೆಯಿಂದ ಬೇಸತ್ತ ನಂದಿನಿ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ “ಪಾಪಾ, ನಾನು ನನ್ನ ಜೀವ ಕಳೆದುಕೊಂಡಿದ್ದೇನೆ” ಎಂಬ ಅರ್ಥದ ಸಂದೇಶವನ್ನು ಹಂಚಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಹಲವು ಆರೋಪ-ಪ್ರತಾರೋಪಗಳು ಕೇಳಿಬರುತ್ತಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಯುವಜನರು ಸಂಬಂಧಗಳ ವಿಚಾರದಲ್ಲಿ ಎಚ್ಚರಿಕೆಯಿಂದಿರಬೇಕು ಹಾಗೂ ಜೀವನದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸೂಕ್ತ ಪರಿಶೀಲನೆ ಮತ್ತು ಕುಟುಂಬದ ಸಲಹೆ ಅಗತ್ಯವೆಂಬ ಚರ್ಚೆಯೂ ಈ ಘಟನೆಯ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ.

Related News

error: Content is protected !!