ಚಿತ್ರದುರ್ಗ ಜಿಲ್ಲೆಯಲ್ಲಿ ಹೆಲ್ತ್ ಇನ್ಸ್ಪೆಕ್ಟರ್‌ರೊಬ್ಬರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿ, ಬಳಿಕ ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

ಚಳ್ಳಕೆರೆ ತಾಲೂಕಿನ ಚೌಳೂರು ಗ್ರಾಮದ ನಿವಾಸಿಯಾಗಿದ್ದ ಶಿವಮೂರ್ತಿ (47) ಪಾವಗಡ ತಾಲೂಕಿನ ಲಿಂಗದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (PHC) ಹೆಲ್ತ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಶಿವಮೂರ್ತಿಯನ್ನು ದುಷ್ಕರ್ಮಿಗಳು ಚನ್ನಗಿರಿ ಠಾಣೆ ವ್ಯಾಪ್ತಿಯಲ್ಲಿ ಕಾರು ಅಡ್ಡಗಟ್ಟಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಂತರ ಮೃತದೇಹವನ್ನು ಇಂಗಳದಾಳ್ ಲಂಬಾಣಿಹಟ್ಟಿ ಸಮೀಪಕ್ಕೆ ಕೊಂಡೊಯ್ದು ಪೆಟ್ರೋಲ್ ಸುರಿದು ಸುಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ಸುಮಾರು ಒಂದು ವಾರದ ಬಳಿಕ ಶಿವಮೂರ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ತೀವ್ರ ಸಂಚಲನ ಮೂಡಿಸಿದೆ. ಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ SOCO ತಂಡ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಂಡಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

Related News

error: Content is protected !!