
ಹಾಸನ: ಪತ್ನಿಗೆ ಬೇರೊಬ್ಬನೊಂದಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಶಂಕಿತ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು 38 ವರ್ಷದ ಗಗನ ಎಂದು ಗುರುತಿಸಲಾಗಿದ್ದು, ಪತಿ ರಘು (41) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ದಂಪತಿ ನಡುವೆ ಅನೈತಿಕ ಸಂಬಂಧದ ಆರೋಪದ ವಿಚಾರವಾಗಿ ಕೆಲ ದಿನಗಳಿಂದ ಮನಸ್ತಾಪ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಬಳಿಕ ಗಗನ ಅವರ ಮೃತದೇಹಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಕರಣದ ನಿಖರ ಕಾರಣ ಮತ್ತು ಘಟನೆಯ ಸಂಪೂರ್ಣ ಹಿನ್ನೆಲೆ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.






