ಕಲಬುರಗಿ: ಆದಾಯದ ಮೂಲಕ್ಕೆ ಹೋಲಿಸಿದರೆ ಅಧಿಕ ಪ್ರಮಾಣದ ಆಸ್ತಿ ಹೊಂದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಮೊಹಮ್ಮದ್ ಹಾಜಿ ಪಟೇಲ್ ಅವರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು 2015ರ ಫೆಬ್ರುವರಿ 25ರಂದು ಮೊಹಮ್ಮದ್ ಹಾಜಿ ಪಟೇಲ್ ಅವರ ನಿವಾಸ ಹಾಗೂ ಸಂಬಂಧಿತ ಸ್ಥಳಗಳ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿದ್ದರು.

ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ಗುರುಲಿಂಗಪ್ಪ ಮರಿಬಶೆಟ್ಟಿ ಅವರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೊಹಮ್ಮದ್ ಹಾಜಿ ಪಟೇಲ್ ಅವರಿಗೆ ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

Related News

error: Content is protected !!