
ಚಿಕ್ಕೋಡಿ: ಪಟ್ಟಣದ ವಿವಿಧ ಹೋಟೆಲ್‌ಗಳು ಹಾಗೂ ಢಾಬಾಗಳಲ್ಲಿ ಅನಧಿಕೃತವಾಗಿ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ವಿರುದ್ಧ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿದ್ದು, ಒಟ್ಟು 29 ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ.
ಚಿಕ್ಕೋಡಿ ತಹಶೀಲ್ದಾರ್ ರಾಜೇಶ ಬುರ್ಲಿ ಅವರ ನೇತೃತ್ವದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ದಾಳಿ ನಡೆಸಿದರು. ಸಬ್ಸಿಡಿ ದರದಲ್ಲಿ ದೊರೆಯುವ ಗೃಹಬಳಕೆ ಸಿಲಿಂಡರ್‌ಗಳನ್ನು ವ್ಯಾಪಾರಿಕ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ವಿವಿಧ ಹೋಟೆಲ್ ಹಾಗೂ ಢಾಬಾಗಳನ್ನು ಪರಿಶೀಲಿಸಲಾಯಿತು.
ಈ ವೇಳೆ ಕೆಲವು ಹೋಟೆಲ್ ಮತ್ತು ಢಾಬಾಗಳಲ್ಲಿ ನಿಯಮಬಾಹಿರವಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ಸ್ಥಳದಲ್ಲೇ ವಶಕ್ಕೆ ಪಡೆದರು.
ವಾಣಿಜ್ಯ ಸಿಲಿಂಡರ್ ಬಳಕೆಗೆ ಸೂಚನೆ
ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಾಜೇಶ ಬುರ್ಲಿ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೆ, ಪಟ್ಟಣದ ಎಲ್ಲಾ ಹೋಟೆಲ್ ಮತ್ತು ಢಾಬಾ ಮಾಲೀಕರು ಕಡ್ಡಾಯವಾಗಿ ಅಧಿಕೃತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳನ್ನೇ ಬಳಸಬೇಕು ಎಂದು ಅವರು ಸೂಚಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆ ಶಿರಸ್ತೆದಾರ ಹಣಮಂತ ಕಾಂಡೆಕರ ಹಾಗೂ ಆಹಾರ ನಿರೀಕ್ಷಕಿ ಐಶ್ವರ್ಯ ದಿವಟೆ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.






