ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ್ ಸರ್ಕಲ್ ಬಳಿ ದ್ವಿಚಕ್ರ ವಾಹನ ಮತ್ತು ಪೊಲೀಸ್‌ ಜೀಪ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟವರು ಕೆಜಿಎಫ್ ತಾಲ್ಲೂಕಿನ ಬಡಮಾಕನಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂದು ಗುರುತಿಸಲಾಗಿದೆ. ಅವರು ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ, ಕೋಲಾರ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಪ್ರಯಾಣಿಸುತ್ತಿದ್ದ ಬೊಲೆರೋ ಪೊಲೀಸ್‌ ವಾಹನ ಬೈಕ್‌ಗೆ ಬಲವಾಗಿ ಗುದ್ದಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ನಾರಾಯಣಸ್ವಾಮಿ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ದಾರಿ ಮಧ್ಯೆಯೇ ಕೊನೆಯುಸಿರೆಳೆದರು.

ಘಟನೆಯ ಬಗ್ಗೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Related News

error: Content is protected !!