ಕೊಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಆನ್‌ಲೈನ್ ಆ್ಯಪ್‌ಗಳ ಸಹಾಯದಿಂದ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿದಿದ್ದಾರೆ. ಸಿಇಎನ್ ಪೊಲೀಸರ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ನಯಾಜ್ ಎಂಬಾತನನ್ನು ಬಂಧಿಸಿದ್ದಾರೆ.

ಬಂಧಿತನಿಂದ ಎರಡು ಮೊಬೈಲ್ ಫೋನ್‌ಗಳು ಮತ್ತು ಖಾತೆಯಲ್ಲಿ ಇರುವ ₹5.19 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ನಗದು ಹಾಗೂ ಯುಪಿಐ ಮೂಲಕ ಹಣ ಸ್ವೀಕರಿಸಿ, ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಚಟುವಟಿಕೆ ನಡೆಸುತ್ತಿದ್ದಾನೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರಬಹುದೆಂಬ ಶಂಕೆಯಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ದಾಳಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಎಸ್‌ಪಿ ಸಿ.ಆರ್. ರವಿಶಂಕರ್, ಎಚ್.ಸಿ. ಜಗದೀಶ್, ಸಿಇಎನ್ ವಿಭಾಗದ ಅಧಿಕಾರಿಗಳಾದ ರಾಜೇಶ್, ಎಸ್.ಆರ್. ಜಗದೀಶ್, ವಿನಯ್, ಶಿವಾನಂದ, ಅರುಣ್ ಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.

ಪೋಲೀಸರು ಇದೀಗ ಬೆಟ್ಟಿಂಗ್ ಜಾಲದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ.

Related News

error: Content is protected !!