ಬೆಳಗಾವಿ ನಗರ ಹೊರವಲಯದಲ್ಲಿರುವ ರೆಸಾರ್ಟ್‌ವೊಂದರಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘೋರ ಘಟನೆ ನಡೆದಿದೆ. ಹತ್ತು ದಿನಗಳ ಹಿಂದೆ ಈ ಅಮಾನವೀಯ ಕೃತ್ಯ ನಡೆದಿದೆ ಎನ್ನಲಾಗಿದ್ದು, ಬಾಲಕಿ ತೀವ್ರ ಹೊಟ್ಟೆ ನೋವು ಎಂದು ಮನೆಗೆ ಮರಳಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಬಾಲಕಿಯ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಸಾಕೀಬ್ ಎಂಬಾತ ತನ್ನ ಹೆಸರಲ್ಲಿ ರೆಸಾರ್ಟ್‌ನಲ್ಲಿ ರೂಮ್ ಬುಕಿಂಗ್ ಮಾಡಿದ್ದನೆಂಬುದು ತಿಳಿದುಬಂದಿದೆ. ಬಾಲಕಿಯ ಪರಿಚಿತನಾಗಿರುವ ಮತ್ತೊಬ್ಬ ಅಪ್ರಾಪ್ತ ಬಾಲಕ ಆಕೆಯನ್ನು ಆ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದ. ಆಕೆಯು ನಿರ್ಬಂಧಿತ ಸ್ಥಿತಿಯಲ್ಲಿದ್ದರೂ ಸಹ ಈ ಕೃತ್ಯಕ್ಕೆ ದಾಳಿಯಾಗಿದ್ದಾಳೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕೀಬ್ ಹಾಗೂ ಇನ್ನೊಬ್ಬ ಅಪ್ರಾಪ್ತ ಬಾಲಕನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಘಟನೆಗೆ ಸಂಬಂಸಿದಂತೆ ಪೊಲೀಸರೊಬ್ಬರ ಮಗನೂ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇರೆಗೆ, ಆತ ಈಗಾಗಲೇ ತಲೆಮರೆಸಿಕೊಂಡಿದ್ದು, ಪೊಲೀಸರು ಅವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

Related News

error: Content is protected !!