ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಘೋರ ಹತ್ಯೆಯೊಂದು ನಡೆದಿದೆ. ಪಿಕಪ್ ವಾಹನದಲ್ಲಿ ಮರಳು ಅನ್‌ಲೋಡ್ ಮಾಡುತ್ತಿದ್ದ ಚಾಲಕನನ್ನು ಇಬ್ಬರು ದುಷ್ಕರ್ಮಿಗಳು ಕತ್ತಿಯಿಂದ ಎಬ್ಬಿಸಿ ಬರ್ಬರವಾಗಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ರಹೀಮ್ ಎಂದು ಗುರುತಿಸಲಾಗಿದ್ದು, ಅಪಘಾತದ ವೇಳೆ ರಹೀಮ್ ಜೊತೆಯಲ್ಲಿ ಇದ್ದ ಮತ್ತೊಬ್ಬ ವ್ಯಕ್ತಿಗೂ ಗಾಯವಾಗಿದೆ. ಕೈಗೆ ತೀವ್ರ ಗಾಯಗೊಂಡ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಆತನು ಚಿಕಿತ್ಸೆ ಪಡೆಯುತ್ತಿದ್ದಾನೆ.
ಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ಬೆಳಕಿಗೆ ಬಂದಿಲ್ಲ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
ಸ್ಥಳೀಯರಲ್ಲಿ ಆತಂಕ ಮೂಡಿಸಿರುವ ಈ ಘಟನೆಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ನಿರೀಕ್ಷೆಯಲ್ಲಿದೆ.
