ವಾಷಿಂಗ್ಟನ್: ನ್ಯೂಜೆರ್ಸಿಯ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಅಮೆರಿಕಾದ ಇಮ್ಮಿಗ್ರೇಶನ್ ಅಧಿಕಾರಿಗಳು ಹಿಂಸೆ ಕೊಟ್ಟು ಅಮೆರಿಕದಿಂದ ಗಡಿಪಾರು ಮಾಡಿರುವ ಘಟನೆಯ ವಿಡಿಯೋಗಳು ಹರಿದಾಡುತ್ತಿದ್ದು, ನಾನಾ ಮೂಲಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ವಿಡಿಯೋದಲ್ಲಿ ನೋಡಬಹುದಾದಂತೆ, ನಾಲ್ವರು ಅಧಿಕಾರಿಗಳು ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ, ಕೈ ಕಾಲುಗಳನ್ನು ಕಟ್ಟಿಹಾಕಿದ್ದಾರೆ. ಅವರಲ್ಲಿ ಇಬ್ಬರು ತಮ್ಮ ಮೊಣಕಾಲನ್ನು ವಿದ್ಯಾರ್ಥಿಯ ಬೆನ್ನಿನ ಮೇಲೆ ಒತ್ತಿದ್ದಾರೆ.

“ಈ ರೀತಿಯ ಅಮಾನವೀಯ ವರ್ತನೆ ಶಿಕ್ಷಾರ್ಹ. ಸಂಬಂಧಿತ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು,” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಹಲವರು, ನ್ಯಾಯ ವ್ಯವಸ್ಥೆ ತನಿಖೆಗೆ ಕೈಹಾಕಬೇಕು ಮತ್ತು ವಿದ್ಯಾರ್ಥಿಗೆ ತಕ್ಷಣ ನೆರವು ಒದಗಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಈ ಮಧ್ಯೆ, ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗೆ ಸಹಾಯ ಮಾಡಬೇಕೆಂದು ಮನವಿ ಸಲ್ಲಿಸಲಾಗಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳ ನಿರೀಕ್ಷೆಯಲ್ಲಿದ್ದು, ತನಿಖೆಯ ಪ್ರಗತಿಯನ್ನು ಗಮನದಲ್ಲಿಡಲಾಗಿದೆ.

 

Related News

error: Content is protected !!