ಹುಣಸೂರು: ಪ್ಯಾಸೆಂಜರ್ ಆಟೋ ಬಳಸಿಕೊಂಡು ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಯುವಕನನ್ನು ಹುಣಸೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಯಿಂದ ಲಕ್ಷಾಂತರ ಮೌಲ್ಯದ ಗಾಂಜಾ ಹಾಗೂ ಆಟೋ ವಶಪಡಿಸಿಕೊಳ್ಳಲಾಗಿದೆ.

ಬಂಧಿತ ವ್ಯಕ್ತಿ ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದ ಸಯ್ಯದ್ ಯೂನಸ್. ಈತನಿಂದ ಸುಮಾರು 926 ಗ್ರಾಂ ಒಣ ಗಾಂಜಾ ಹಾಗೂ ಪ್ಯಾಸೆಂಜರ್ ಆಟೋ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯ ಸುಮಾರು ₹50,000 ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರಿನಿಂದ ಪಂಚವಳ್ಳಿ ಕಡೆಗೆ ಗಾಂಜಾ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಹುಣಸೂರು ನಗರ ಠಾಣೆ ಪೊಲೀಸರು ಹಾಳಗೆರೆ ಜಂಕ್ಷನ್ ಬಳಿ ತಪಾಸಣೆ ನಡೆಸಿದ್ದು, ಈ ವೇಳೆ ಆಟೋದಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾ ಪತ್ತೆಯಾಗಿದೆ. ವಿಚಾರಣೆ ವೇಳೆ ಆರೋಪಿ ಹಣ ಗಳಿಕೆಯ ಹಿನ್ನಲೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದಾಗಿ ಒಪ್ಪಿಗೆ ನೀಡಿದ್ದಾನೆ.

ಈ ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್ ಸಂತೋಷ್ ಕಶ್ಯಪ್, ಎಸ್‌ಐಗಳು ಜಮೀರ್ ಅಹಮದ್, ಮಹಾಲಿಂಗಯ್ಯ ಮತ್ತು ಸಿಬ್ಬಂದಿ ಅರುಣ್, ಶ್ರೀರಾಜರತ್ನಂ, ಮಂಜುನಾಥ್, ಇರ್ಫಾನ್, ಮಹೇಂದ್ರ, ರವಿಕುಮಾರ್‌ ಭಾಗವಹಿಸಿದ್ದರು. ಡಿವೈಎಸ್‌ಪಿ ಗೋಪಾಲಕೃಷ್ಣ ನೇತೃತ್ವ ನೀಡಿದ್ದು, ಜಿಲ್ಲಾ ಎಸ್‌ಪಿ ವಿಷ್ಣುವರ್ಧನ್ ತಂಡದ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದಾರೆ.

Related News

error: Content is protected !!