ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ ಪೊಲೀಸರು ವಿಶೇಷ ದಾಳಿ ನಡೆಸಿದ್ದು, 58 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸೋಮವಾರ (ಜೂನ್ 16) ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ಈ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ನಗರಾದ್ಯಂತ ವಿವಿಧ ಪೊಲೀಸ್ ಠಾಣೆಗಳ ಸಂಚಾರ ಠಾಣಾಧಿಕಾರಿಗಳ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟಾರೇ 4,559 ಶಾಲಾ ವಾಹನಗಳನ್ನು ತಪಾಸಣೆ ಮಾಡಲಾಯಿತು.

ಈ ವೇಳೆ ಮದ್ಯಪಾನಿಸಿದ್ದ ಸ್ಥಿತಿಯಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ 58 ಚಾಲಕರನ್ನು ಪತ್ತೆ ಹಾಕಿ, ಅವರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ, ಈ ಚಾಲಕರ ಡ್ರೈವಿಂಗ್ ಲೈಸೆನ್ಸ್‌ಗಳನ್ನು ಅಮಾನತುಗೊಳಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ.

“ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಯಾವ ರೀತಿಯ ಅಸಡ್ಡೆಯೂ ಸಹಿಸಿಕೊಳ್ಳಲಾಗದು. ಈ ರೀತಿಯ ತಪಾಸಣೆ ಮುಂದೆಯೂ ನಿಷ್ಕಳಂಕವಾಗಿ ನಡೆಯಲಿದೆ” ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ಕ್ರಮ ಮಕ್ಕಳ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಹತ್ವದ ಹೆಜ್ಜೆಯಾಗಿದೆ.

Leave a Reply

Your email address will not be published. Required fields are marked *

Related News

error: Content is protected !!