ಬೆಂಗಳೂರು: ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ರಸ್ತೆ ಮೇಲೆ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ.

ಬಂಧಿತನನ್ನು ಮೊಹಮ್ಮದ್ ಅಸ್ಲಾಂ ಎಂದು ಗುರುತಿಸಲಾಗಿದ್ದು, ವೆಸ್ಟ್ ಆಪ್ ಕಾರ್ಡ್ ರಸ್ತೆ ಹಾಗೂ ಮಾಗಡಿ ಮೈನ್ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ವ್ಹೀಲಿಂಗ್ ಮಾಡುವ ಮೂಲಕ ಆತಂಕದ ವಾತಾವರಣ ಸೃಷ್ಟಿಸಿದ್ದಾನೆ. ಅಸ್ಲಾಂನ ಹಂಗಾಮಿಯಿಂದ ಸಾರ್ವಜನಿಕರು ಭೀತಿಗೊಳಗಾಗಿದ್ದರು ಎನ್ನಲಾಗಿದೆ.

ಆರೋಪಿ ನಡೆಸಿದ ಈ ಸಾಹಸವನ್ನು ಗಮನದಲ್ಲಿಟ್ಟುಕೊಂಡು ಸಂಚಾರ ಪೊಲೀಸ್ ಇಲಾಖೆ ತ್ವರಿತ ಕ್ರಮ ಕೈಗೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು, ಅವನು ಬಳಸುತ್ತಿದ್ದ ಸ್ಕೂಟರ್‌ನ್ನು ಜಪ್ತಿ ಮಾಡಲಾಗಿದೆ.

ಈ ಸಂಬಂಧ ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಜರುಗುತ್ತಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಈ ರೀತಿಯ ಕೃತ್ಯಗಳಿಗೆ ಯಾವುದೇ ಸಹಿಷ್ಣುತೆ ಇರುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಪೊಲೀಸರು ನೀಡಿದ್ದಾರೆ.

error: Content is protected !!