Latest

ಆಂಬುಲೆನ್ಸ್ ಸಿಗದೆ ಬೈಕ್ ನಲ್ಲಿ ಸಹೋದರಿಯ ಶವವನ್ನ ಸಾಗಿಸಿದ ಸಹೋದರ.

ಆಂಬುಲೆನ್ಸ್ ಸಿಗದ ಕಾರಣ ಯುವಕನೊಬ್ಬ ತನ್ನ ಸಹೋದರಿಯ ಮೃತದೇಹವನ್ನ ಬೈಕ್ ನಲ್ಲಿ ಹತ್ತುಕಿಲೋ ಮೀಟರ್ ಸಾಗಿಸಿರುವ ಘಟನೆ ಉತ್ತರ ಪ್ರದೇಶ ಕೌಶಾಂಬಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಶಾಲಾ ಮಧ್ಯಂತರ ಪರೀಕ್ಷೆಯಯಲ್ಲಿ ಫೇಲ್ ಆಗುವ ಭಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷಯ ತಿಳಿದ ತಕ್ಷಣ ಸಂಬಂಧಿಕರು ಆಕೆಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರಾದೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವಾಹನ ಸಿಗದ ಕಾರಣ ವಿದ್ಯಾರ್ಥಿಯ ಸಹೋದರ ಬೈಕ್‌ನಲ್ಲಿ ಶವವನ್ನು ಮನೆಗೆ ತಂದಿದ್ದಾನೆ. ಈ ಘಟನೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಭರ್ವಾರಿ ಪುರಸಭೆಯ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ.
ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ಉತ್ತಮವಾಗಿ ಬರೆದಿಲ್ಲ ಎಂದು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಳು. ಗುರುವಾರ ವಿದ್ಯಾರ್ಥಿನಿ ತನ್ನ ರೂಮ್ ಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದ ತಕ್ಷಣ ಸಂಬಂಧಿಕರು ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಇದಾದ ಬಳಿಕ ಮೃತಳ ಸಹೋದರ ಮೃತದೇಹವನ್ನ ತೆಗೆದುಕೊಂಡು ಹೋಗಲು ಆಸ್ಪತ್ರೆಯ ಆಡಳಿತ ಮಂಡಳಿಗೆ ವಾಹನ ನೀಡುವಂತೆ ಬೇಡಿಕೆ ಇಟ್ಟರೂ ಅರ್ಧ ಗಂಟೆ ಕಾದರೂ ವಾಹನ ಸಿಗದ ಕಾರಣ, ಕೊನೆಗೆ ಸಹೋದರ ಸಹೋದರಿಯ ಶವವನ್ನು ಬೈಕ್‌ನಲ್ಲಿ ತೆಗೆದುಕೊಂಡು ಹೋಗಿದ್ದಾನೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

20 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

20 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

20 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

20 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

20 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

20 hours ago