Categories: CrimeLatest

ಕತ್ತಿ ತೋರಿಸಿ ಮನೆಗೆ ನುಗ್ಗಿದ ದುಷ್ಕರ್ಮಿ; ₹3 ಲಕ್ಷ ಮೌಲ್ಯದ ತಾಳಿ ಸರ ಕಸಿದು ಪರಾರಿ

ಸಿದ್ದಾಪುರ: ತಾಲೂಕಿನ ಹಾಳದಕಟ್ಟಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿ ಕತ್ತಿ ತೋರಿಸಿ ಬೆದರಿಕೆ ಹಾಕಿ, ಸುಮಾರು ₹3 ಲಕ್ಷ ಮೌಲ್ಯದ ಬಂಗಾರದ ತಾಳಿ ಸರ ಕಸಿದು ಪರಾರಿಯಾದ ಘಟನೆ ನಡೆದಿದೆ.

ಹಾಳದಕಟ್ಟಾದ ಸೊರಬ ರಸ್ತೆಯ ಪದ್ಮರಾಜ್ ವಿಲ್ಲಾ ನಿವಾಸಿ ಪೂನಂ ಗಣಪತಿ ಶೇಟ್ (42) ಅವರು ನೀಡಿದ ದೂರಿನ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 22ರಂದು ಸಂಜೆ ಸುಮಾರು 4.22 ಗಂಟೆಗೆ ಕತ್ತಿ ಹಿಡಿದು ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿ, ಮಹಿಳೆಗೆ ಬಂಗಾರ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಈ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿ ಮನೆಯಿಂದ ಹೊರಬರಲು ಯತ್ನಿಸಿದಾಗ, ಆರೋಪಿಯು ಅವರ ಕುತ್ತಿಗೆಯಲ್ಲಿದ್ದ ತಾಳಿ ಸರವನ್ನು ಬಲವಂತವಾಗಿ ಎಳೆದಿದ್ದಾನೆ. ಪರಿಣಾಮ ಸರ ತುಂಡಾಗಿ, ಸುಮಾರು 20.5 ಗ್ರಾಂ ತೂಕದ ಬಂಗಾರದ ಆಭರಣಗಳು ಆರೋಪಿಯ ಕೈಗೆ ಸಿಕ್ಕಿದ್ದು, ಅವುಗಳನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ.

ಘಟನೆಯಲ್ಲಿ ಮಹಿಳೆಯ ಕುತ್ತಿಗೆಗೆ ಗಾಯವಾಗಿದ್ದು, ಕಳವಾಗಿರುವ ಬಂಗಾರದ ಆಭರಣಗಳ ಮೌಲ್ಯ ಸುಮಾರು ₹3 ಲಕ್ಷ ಎಂದು ಅಂದಾಜಿಸಲಾಗಿದೆ.

ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಕಾರವಾರದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಶಿರಸಿ ಡಿವೈಎಸ್‌ಪಿ ಗೀತಾ ಪಾಟೀಲ್, ಸಿದ್ದಾಪುರ ಪಿಎಸ್‌ಐ ಶಾಂತಿನಾಥ ಕೆ.ಪಾಸಾನೆ, ಕಾರವಾರ ಪೊಲೀಸ್ ಕಚೇರಿಯಿಂದ ಸೋಕೋ ಅಧಿಕಾರಿಗಳು, ಬೆರಳು ಮುದ್ರೆ ಘಟಕದ ಅಧಿಕಾರಿಗಳು, ಶ್ವಾನ ದಳ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆ ಮುಂದುವರೆದಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

17 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

21 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago