Categories: Latest

10ನೇ ತರಗತಿಯು ಓದದವ 20 ವರ್ಷಗಳಿಂದ ದಂತ ವೈದ್ಯ

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಹಲ್ಲು ಕೀಳಿಸಲು ಹೋದ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ ಘಟನೆ ಇನ್ನೂ ಮಂಕಾಗುವ ಮುನ್ನವೇ, ಹೈದರಾಬಾದ್‌ನಲ್ಲಿ ನಕಲಿ ದಂತವೈದ್ಯನೊಬ್ಬ ಸಿಕ್ಕಿಬಿದ್ದಿದ್ದಾನೆ.

ಉತ್ತರ ಪ್ರದೇಶ ಮೂಲದ ರಮೇಶ್ ಎಂಬಾತ, 10ನೇ ತರಗತಿಯನ್ನು ಕೂಡ ಪೂರ್ಣಗೊಳಿಸದೇ, ನಕಲಿ ಬಿ.ಡಿ.ಎಸ್ ಪ್ರಮಾಣಪತ್ರಗಳ ಸಹಾಯದಿಂದ ಕಳೆದ 20 ವರ್ಷಗಳಿಂದ ದಂತವೈದ್ಯನಂತೆ ಕೆಲಸ ಮಾಡುತ್ತಿದ್ದನು. ಮಲ್ಕಾಜ್‌ಗಿರಿ ಎಸ್‌ಒಟಿ ತಂಡ ನಡೆಸಿದ ದಾಳಿಯಲ್ಲಿ ಈತನ ಅಕ್ರಮ ಕ್ಲಿನಿಕ್ ಪತ್ತೆಯಾಗಿದ್ದು, ಸಿಕಂದರಾಬಾದ್‌ನ ನರೆಡ್ಮೆಟ್‌ನಲ್ಲಿ ಬಂಧಿಸಲಾಗಿದೆ.

ರಮೇಶ್ ತಡರಾತ್ರಿ ರಿಂದ ಬೆಳಗಿನ ಜಾವದವರೆಗೆ ಕ್ಲಿನಿಕ್ ನಡೆಸುತ್ತಿದ್ದನು. ಅವನ ಅನುಮಾನಾಸ್ಪದ ಸಮಯದ ಬಗ್ಗೆ ಸ್ಥಳೀಯರಿಗೆ ಶಂಕೆ ಮೂಡಿದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ, ಅವನಿಗೆ ಯಾವುದೇ ಮಾನ್ಯ ವೈದ್ಯಕೀಯ ಅರ್ಹತೆ ಇಲ್ಲ ಎಂಬುದನ್ನು ದೃಢಪಡಿಸಿದ್ದಾರೆ.

ಇಷ್ಟೊಂದು ವರ್ಷಗಳಿಂದ ಯಾವುದೇ ಅನುಮತಿ ಅಥವಾ ಪರಿಶೀಲನೆ ಇಲ್ಲದೆ ಈತ ದಂತವೈದ್ಯನಾಗಿ ಕಾರ್ಯನಿರ್ವಹಿಸಿರುವುದು ಆಶ್ಚರ್ಯ ಮೂಡಿಸಿದೆ. ಅವನು ಎಷ್ಟು ಜನರಿಗೆ ಚಿಕಿತ್ಸೆ ನೀಡಿದ್ದಾನೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದೇ ರೀತಿಯಲ್ಲಿ, ಕೆಲ ಸಮಯದ ಹಿಂದೆ ಎಸ್‌ಎಸ್‌ಎಲ್‌ಸಿ ಮಟ್ಟದ ಶಿಕ್ಷಣ ಹೊಂದಿದ್ದ ಇಬ್ಬರು ನಕಲಿ ವೈದ್ಯರು ಸ್ತ್ರೀರೋಗ ತಜ್ಞರಾಗಿ ಕೆಲಸ ಮಾಡಿ, ಹೆರಿಗೆಯ ವೇಳೆ ಮಹಿಳೆಯೊಬ್ಬರ ಸಾವಿಗೆ ಕಾರಣರಾಗಿದ್ದರು. ಈ ಘಟನೆಗಳು ನಕಲಿ ವೈದ್ಯರ ಅಪಾಯದ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ನೀಡುತ್ತಿವೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

6 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

12 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago