ಸಿಲಿಕಾನ್ ಸಿಟಿಯಲ್ಲಿ ಎಷ್ಟೇಲ್ಲಾ ಕಳ್ಳತನ ಪ್ರಕರಣಗಳನ್ನು ನೋಡಿರುತ್ತೇವೆ ಆದರೆ ಮನೆಮಂದಿಯಲ್ಲಾ ಕಳ್ಳತನದ ಕೆಲಸಕ್ಕೆ ಇಳಿಯುವುದು ನೋಡಿದ್ರೆ ಆಶ್ಚರ್ಯವಾಗುತ್ತೆ. ಪಿಕ್ ಪಾಕೆಟ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡ ತಂಡದ ವಿಚಾರಣೆ ಮಾಡಿದ ಪೊಲೀಸರಿಗೆ ಅವರ ಇಡೀ ಕುಟುಂಬವೇ ಕಳ್ಳತನ ಮಾಡುವ ಕುಟುಂಬ ಎಂದು ತಿಳಿದು ಪೊಲೀಸರೇ ಶಾಕ್ ಆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಎಸ್.ಆರ್ ನಗರದ ಪೊಲೀಸರು ಪಿಕ್ ಪಾಕೆಟ್ ಪ್ರಕರಣದಲ್ಲಿ ತಂಡವೊಂದನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಈ ವಿಷಯ ಹೊರಬಿದ್ದಿದೆ. ಗಂಡ, ಹೆಂಡತಿ, ಅಣ್ಣ, ಭಾವ, ಮಕ್ಕಳು ಸೇರಿದಂತೆ ಆ ಕುಟುಂಬದ ಪ್ರತಿಯೊಬ್ಬರು ಕೂಡಾ ಕಳ್ಳರೇ ಆಗಿದ್ದರು. ಕಳ್ಳತನವೇ ಇವರ ಫುಲ್ ಟೈಂ ಜಾಬ್ ಆಗಿತ್ತು. ಅದರಿಂದಲೇ ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂಬ ವಿಷಯವನ್ನು ಕೇಳಿ ಪೊಲೀಸರು ಇಂತಹವರು ಇರುತ್ತಾರ ಎಂದು ದಂಗಾಗಿದ್ದಾರೆ.
ಬನಶಂಕರಿ ನಿವಾಸಿಗಳಾದ ವೇಲು, ಸುಂದರ್‌ರಾಜ್, ಮಹೇಶ್, ಸೇರಿದಂತೆ ಎಲ್ಲರೂ ಬೆಳಗಾದರೆ ಒಟ್ಟಿಗೆ ಒಂದು ಮೀಟಿಂಗ್ ಮಾಡುತ್ತಾರೆ. ಇಂದು ಯಾರು ಯಾವ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಯಾವ ಬಸ್ ರೂಟ್ ಅಲ್ಲಿ ಪಿಕ್‌ಪಾಕೆಟ್ ಮಾಡಬೇಕು ಎಂಬುದನ್ನು ನಿರ್ಧರಿಸಿ ಕುಟುಂಬದ ಎಂಟೂ ಜನ ಬೇರೆ ಬೇರೆ ಕಡೆ ತೆರಳುತ್ತಿದ್ದರು. ಅದರಂತೆ ಕೆಲವರು ಜನರ ಗಮನವನ್ನು ಬೇರೆಡೆ ಸೆಳೆಯುವಂತೆ ಮಾಡಿ ಚಿನ್ನಾಭರಣ ಕಳ್ಳತನ ಮಾಡಿದರೆ ಇನ್ನೂ ಕೆಲವರು ರಶ್ ಇರುವ ಬಿಎಂಟಿಸಿ ಬಸ್‌ಗಳಲ್ಲಿ ಹತ್ತಿಕೊಂಡು ಪರ್ಸ್, ಮೊಬೈಲ್‌ಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದರು.
ಸಂಜೆ ಕದ್ದ ಮಾಲನ್ನು ಮಾರಿ ಬಿಂದಾಸ್ ಜೀವನ ನಡೆಸುತ್ತಿದ್ದರು. ಪರ್ಸ್, ಮೊಬೈಲ್, ಸಣ್ಣ ಪ್ರಮಾಣದ ಹಣಗಳನ್ನು ಕದ್ದರೆ ಜನರು ಅದನ್ನು ಅಷ್ಟು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಅಲ್ಲದೇ ಇಂತಹ ಸಣ್ಣ ಪುಟ್ಟ ವಿಷಯಗಳಿಗೆ ಪೊಲೀಸರಿಗೆ ದೂರು ನೀಡುವುದಿಲ್ಲ ಎಂಬ ಧೈರ್ಯದ ಮೇಲೆ ಇದನ್ನೇ ಫುಲ್‌ಟೈಂ ವೃತ್ತಿಯನ್ನಾಗಿ ಮಾಡಿಕೊಂಡಿದ್ದರು. ಇದೀಗ ಖತರ್‌ನಾಕ್ ಕಳ್ಳರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…