ಬೆಳೆ ಸಾಲ ನಿರಾಕರಿಸಿದ ಹಿನ್ನೆಲೆ ರೈತನೊಬ್ಬ ಬ್ಯಾಂಕಿನಲ್ಲೇ ಕೀಟನಾಶಕ ಸೇವಿಸಿದ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಹೊಸಹೊಳಲು ಗ್ರಾಮದಲ್ಲಿ ಸೋಮವಾರ ಮದ್ಯಾಹ್ನ ನಡೆದಿದೆ. ಹೊಸಹೂಳಲು ಗ್ರಾಮದ 73 ವರ್ಷದ ನಿಂಗೇಗೌಡ ಎಂಬವರೇ ವಿಷ ಸೇವಿಸಿದ ರೈತನಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಂಗೇಗೌಡ 4 ಎಕರೆ ಜಮೀನು ಹೊಂದಿದ್ದು, ಅಂತರ ಸಂತೆ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್‍ನಲ್ಲಿ ಕಬ್ಬಿನ ಬೆಳೆ ಸಾಲಕ್ಕೆ ಅರ್ಜಿ ಹಾಕಿದ್ದರು. ಒಂದು ತಿಂಗಳ ನಂತರ ಬ್ಯಾಂಕಿನವರು ಸಿಬಿಲ್ ರೇಟ್ ಕಡಿಮೆ ಇದೆ ನಿಮಗೆ ಸಾಲ ಕೊಡಲು ಬರುವುದಿಲ್ಲ ಎಂದು ತಿಳಿಸಿ ನೋಟಿಸ್ ಕೊಟ್ಟ ಕಾರಣ ಬೇಸರಗೊಂಡ ನಿಂಗೇಗೌಡ ಬ್ಯಾಂಕಿನಲ್ಲಿಯೇ ವಿಷ ಸೇವಿಸಿ ಅಸ್ವಸ್ಥರಾದರು. ಕೂಡಲೇ ಬ್ಯಾಂಕಿನ ಸಿಬ್ಬಂದಿ ನಿಂಗೇಗೌಡರ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದರು. ನಂತರ ಅಸ್ವಸ್ಥಗೊಂಡ ನಿಂಗೇಗೌಡರನ್ನು ಎಚ್.ಡಿ. ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿರುತ್ತಾನೆ
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…