ಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರುವಿಗೆ ಹೋದ ತಹಶೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ. ಜೆಸಿಬಿ ಯಂತ್ರದ ಮುಂದೆ ಕುಳಿತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ರೈತನ ಪಟ್ಟಿಗೆ ಮಣಿದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಬಂದಿದ್ದಾರೆ.
ರತ್ನಪುರಿ ಗ್ರಾಮದ ಸರ್ವೆ ನಂ 1369ರ 1.33 ಗುಂಟೆ ಜಮೀನು ಸರ್ಕಾರಿ ಜಮೀನಾಗಿದೆ.ಸದರಿ ಜಮೀನನ್ನ ದೇಶಕ್ಕೆ ಸೇವೆ ಸಲ್ಲಿಸಿದ ಯೋಧರಿಗೆ ನೀಡುವ ಉದ್ದೇಶದಿಂದ ಮೀಸಲಿಡಲು ಮುಂದಾದ ಅಧಿಕಾರಿಗಳಿಗೆ ಒತ್ತುವರಿ ಬೆಳಕಿಗೆ ಬಂದಿದೆ.
ಒತ್ತುವರಿಯನ್ನ ತೆರವು ಮಾಡಿಸಲು ತಹಸೀಲ್ದಾರ್ ಅಶೋಕ್ ರವರು,ಸರ್ವೆಯರ್ ನಾಗೇಶ್,ರವೀಶ್, ವಿ.ಎ.ಗುರುಪ್ರಸಾದ್ ಆರ್.ಐ.ನಂದೀಶ್ ರವರು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಸಮೇತ ತೆರಳಿದಾಗ ರಾಮದಾಸಯ್ಯ ಎಂಬ ವ್ಯಕ್ತಿ ಅಡ್ಡಿಪಡಿಸಿದ್ದಾನೆ.
ಜೆಸಿಬಿ ಯಂತ್ರದ ಸಮೇತ ಹಾಜರಾದ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದಾನೆ. ನೋಟೀಸ್ ನೀಡದೆ ತೆರವು ಮಾಡಿಸುತ್ತಿರುವುದಾಗಿ ವಾಗ್ವಾದ ನಡೆಸಿದ್ದಾನೆ. ಸದರಿ ಜಾಗವನ್ನ ಒತ್ತುವರಿ ಮಾಡಿಕೊಂಡಿರುವುದಾಗಿ ತಹಸೀಲ್ದಾರ್ ನೋಟೀಸ್ ಜಾರಿ ಮಾಡಿದ್ದಾರೆ. ಒಟ್ಟಾರೆ ರೈತನ ಮೊಂಡುತನಕ್ಕೆ ಬೆದರಿದ ಅಧಿಕಾರಿಗಳು ಬರಿಗೈಲಿ ಹಿಂದಿರುಗಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…