Latest

ಹಣ ಸಿಗುತ್ತದೆ ಎಂದು ನಂಬಿಸಿ ವೃದ್ಧೆಯ ಬಂಗಾರ ದೋಚಿದ ವಂಚಕ.

ಬೆಳಗಾವಿ ಜಿಲ್ಲೆ ಮುತಗಾ ಗ್ರಾಮದಲ್ಲಿ ವೃದ್ಧೆಯೊಬ್ಬರನ್ನು ಮೋಸಗೊಳಿಸಿ ಬಂಗಾರದ ಆಭರಣ ದೋಚಿದ ಘಟನೆ ನಡೆದಿದೆ. 75 ವರ್ಷದ ಉಮಕ್ಕ ರಾಮು ಕೇದಾರಿ ಎಂಬವರು ಈ ವಂಚನೆಯ ಬಲಿಯಾದವರು.

ಸೌತೆಕಾಯಿ ಮಾರಾಟ ಮಾಡಿ ಜೀವನ ಸಾಗಿಸುತ್ತಿರುವ ಉಮಕ್ಕ ಅವರ ಬಳಿ ಅಪರಿಚಿತನೊಬ್ಬ ಬಂದು, “ಅಂಚೆ ಕಚೇರಿಯಲ್ಲಿ ವಯೋವೃದ್ಧರಿಗೆ 6 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ. ನೀವು ಹೋಗಿ ಹಣ ಪಡೆಯಿರಿ” ಎಂದು ಮಾತನಾಡಿದ್ದಾನೆ. ತನ್ನನ್ನು ಪರಿಚಿತನಂತೆ ತೋರಿಸಿಕೊಂಡಿದ್ದ ಈ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ.

ನಂತರ ಒಂದು ಕಟ್ಟಡದ ಬಳಿ ತಂದು, “ಬಂಗಾರದ ಆಭರಣ ಧರಿಸಿ ಒಳಗೆ ಹೋದರೆ ಹಣ ಕೊಡಲ್ಲ. ಅವುಗಳನ್ನು ತೆಗೆದು ಕೊಡಿರಿ” ಎಂದು ಹೇಳಿ, ಉಮಕ್ಕ ಅವರ ಓಲೆ ಮತ್ತು ಬಳೆಗಳನ್ನು ತೆಗೆದುಕೊಂಡಿದ್ದಾನೆ. ವೃದ್ಧೆ ಆತನ ಮಾತು ನಂಬಿ ತನ್ನ ಆಭರಣಗಳನ್ನು ನೀಡಿದ ನಂತರ ಒಳಗೆ ಹೋಗುತ್ತಿದ್ದಂತೆ, ವಂಚಕ ಅಲ್ಲಿಂದ ನಾಪತ್ತೆಯಾಗಿದ್ದಾನೆ.

ತಕ್ಷಣವೇ ಎಚ್ಚೆತ್ತುಕೊಂಡ ಉಮಕ್ಕ ಅವರು ಮಾರಿಹಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಈ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದು, ಸಾರ್ವಜನಿಕರಲ್ಲಿ ಎಚ್ಚರಿಕೆ ವಹಿಸಲು ಪೊಲೀಸರ ಮನವಿ ಮಾಡಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

16 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago