Latest

ಕೆಲಸದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ

ಕೆ ಶ್ರೀಜಾ (48) ವಯಕೋಮ್​ನ ಪೊಲಸ್ಸೆರಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲಸದ ಹೊರೆ ತಾಳಲಾರದೆ ಬಡ್ತಿ ರದ್ದುಗೊಳಿಸುವಂತೆ ಶಿಕ್ಷಣ ಸಚಿವರಿಗೆ ಶ್ರೀಜಾ ಅವರು ಮನವಿ ಮಾಡಿದ್ದರು. ಆದರೆ, ಮನವಿಯನ್ನು ತಿರಸ್ಕರಿಸಿದ ಪರಿಣಾಮ ಆಕೆ ಖಿನ್ನತೆಗೆ ಒಳಗಾಗಿದ್ದಳು ಎಂದು ಸಂಬಂಧಿಕರು ದೂರಿದ್ದಾರೆ.
ವೈಯಕಂ ಬಾಲಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ರೀಜಾ ಅವರು ಜೂ.1ರಂದು ಕೀಜೂರು ಜಿಎಲ್‌ಪಿಎಸ್‌ ಮುಖ್ಯೋಪಾಧ್ಯಾಯಿನಿಯಾಗಿ ಬಡ್ತಿ ಹೊಂದಿದ್ದರು. ಮರುದಿನವೇ ಕೆಲಸಕ್ಕೆ ಸೇರಿದ್ದರು. ಹೆಚ್ಚಿನ ಜವಾಬ್ದಾರಿಯುತ ಕೆಲಸದ ಒತ್ತಡ ತಾಳಲಾರದೆ ರಜೆ ತೆಗೆದುಕೊಂಡಿದ್ದರು. ಇದಾದ ಬಳಿಕ ಜುಲೈ 7 ರಂದು ಶಿಕ್ಷಣ ಸಚಿವರಿಗೆ ಅರ್ಜಿಯನ್ನು ಸಲ್ಲಿಸಿ ತನ್ನ ಪತಿಯ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಬಡ್ತಿಯನ್ನು ರದ್ದುಗೊಳಿಸುವಂತೆ ಕೇಳಿದ್ದರು. ಆಕೆ ಹಿಂದೆ ವೈಯಕಂನಲ್ಲಿ ಕೆಲಸ ಮಾಡುತ್ತಿದ್ದ ಶಾಲೆಯಲ್ಲಿ ಶಿಕ್ಷಕಿಯಾಗಿ ನೇಮಿಸಬೇಕೆಂಬುದು ಆಕೆಯ ಬೇಡಿಕೆಯಾಗಿತ್ತು. ಆದರೆ, ಅರ್ಜಿಯನ್ನು ಪರಿಗಣಿಸಲು ನಿಯಮದಲ್ಲಿ ಅವಕಾಶವಿಲ್ಲ ಎಂದು ಕುರವಿಲಂಗಾಡ್ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಜಾ ಅವರಿಗೆ ಉತ್ತರಿಸಿದ್ದರು.
ಮನವಿ ತಿರಸ್ಕರಿಸಿದ್ದರಿಂದ ತೀವ್ರವಾಗಿ ಮನನೊಂದಿದ್ದ ಶ್ರೀಜಾ ಕೆಲವು ದಿನಗಳವರೆಗೆ ಸರಿ ಹೋಗಬಹುದು ಅಂತಾ ಹೇಗೋ ಕೆಲಸ ಮಾಡಿಕೊಂಡು ಬಂದಿದ್ದರು. ಆದರೆ, ಕೆಲಸದ ಹೊರೆ ಕಡಿಮೆಯಾಗದ ಕಾರಣ, ತೀವ್ರವಾಗಿ ಮನನೊಂದು ಶುಕ್ರವಾರ ಆತ್ಮಹತ್ಯೆಯ ಮಾಡಿಕೊಂಡ ಘಟನೆ ಕೇರಳದ ವಯಕೋಮ್​ನಲ್ಲಿ ನಡೆದಿದೆ.

ಭ್ರಷ್ಟರ ಬೇಟೆ

Recent Posts

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

5 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

5 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

19 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 days ago