Categories: CrimeLatest

ಮದುವೆ ನಿರಾಕರಿಸಿದ್ದಕ್ಕೆ ಅತಿಥಿ ಉಪನ್ಯಾಸಕಿ ಕೊಲೆ.. ಬಳಿಕ ಆರೋಪಿ ಆತ್ಮಹತ್ಯೆ!

ಬೆಂಗಳೂರು ಗ್ರಾಮಾಂತರ: ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿದ ವ್ಯಕ್ತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆಬಚ್ಚಹಳ್ಳಿ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.

40 ವರ್ಷದ ಸರೋಜಾ ಕೊಲೆಯಾದ ಮಹಿಳೆಯಾಗಿದ್ದು, ಆರೋಪಿ ರಾಮಾಂಜಿ (45) ಎಂದು ಗುರುತಿಸಲಾಗಿದೆ. ಆತ ಬಳಿಕ ರೈಲಿಗೆ ತಲೆಕೊಟ್ಟು ಜೀವತ್ಯಾಗ ಮಾಡಿರುವುದು ತಿಳಿದುಬಂದಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ದೇವನಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಸರೋಜಾ ಹಾಗೂ ರಾಮಾಂಜಿ ಕಳೆದ ಒಂದು ವರ್ಷದಿಂದ ಪರಿಚಯ ಹೊಂದಿದ್ದು, ಅವರ ನಡುವೆ ಅನೈತಿಕ ಸಂಬಂಧ ಬೆಳೆಯಿತ್ತು. ಸರೋಜಾ ತನ್ನ ಗಂಡನಿಂದ ವಿಚ್ಛೇದನ ಪಡೆದುಕೊಂಡ ನಂತರ ರಾಮಾಂಜಿಯ ಸಂಪರ್ಕದಲ್ಲಿದ್ದಳು ಎನ್ನಲಾಗಿದೆ.

ಈ ನಡುವೆ ಮದುವೆಯಾಗುವಂತೆ ರಾಮಾಂಜಿ ಒತ್ತಾಯಿಸಿದ್ದರೂ, ಸರೋಜಾ ಅದಕ್ಕೆ ನಿರಾಕರಿಸಿದ್ದಳು. ಇದರಿಂದ ಆಕ್ರೋಶಗೊಂಡ ರಾಮಾಂಜಿ, ಪೂರ್ವಯೋಜಿತವಾಗಿ ಆಕೆಯನ್ನು ಲಾಂಗ್ ಡ್ರೈವ್ ನೆಪದಲ್ಲಿ ಕರೆದುಕೊಂಡು ಹೋಗಿ ಹತ್ಯೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಹತ್ಯೆ ಬಳಿಕ ಸಾಕ್ಷ್ಯ ನಾಶಪಡಿಸಲು ಕಾರಿಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ಘಟನೆಯ ನಂತರ ಪರಾರಿಯಾಗಿದ್ದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ನಡೆಯುತ್ತಿದ್ದ ವೇಳೆ, ಸರೋಜಾ ಹತ್ಯೆಯ ಬಳಿಕ ರಾಮಾಂಜಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

11 minutes ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago