ಕನ್ನಡ ಚಿತ್ರರಂಗದ ನಟ-ನಿರ್ದೇಶಕ Rishab Shetty ಯುಗಾದಿ ಹಬ್ಬದಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್ ಇದೀಗ ಸಿನಿಪ್ರಿಯರ ಗಮನ ಸೆಳೆದಿದೆ. ಬಿಳಿ ಬೋರ್ಡ್ ಮೇಲೆ “ಅಧ್ಯಾಯ ಎರಡು, ಇಲ್ಲಿಂದ ಶುರು” ಎಂದು ಬರೆದುಕೊಂಡಿರುವ ಈ ಪೋಸ್ಟ್, ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ. ಈ ಪೋಸ್ಟ್‌ನಲ್ಲಿ Rishab Shetty Films ಬ್ಯಾನರ್‌ನ ಸುಳಿವೂ ನೀಡಲಾಗಿದೆ.
ಈ ಹಿನ್ನೆಲೆ, ಇದು Kantara ಚಿತ್ರದ ಮುಂದುವರಿದ ಭಾಗದ (ಕಾಂತಾರ-2) ಕಥೆ ಬರೆಯುತ್ತಿರುವ ಸೂಚನೆಯೇ? ಅಥವಾ ಸಂಪೂರ್ಣ ಹೊಸ ಸಿನಿಮಾದ ಪ್ರಾರಂಭವೇ? ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿವೆ.
ಇದೀಗ Rishab Shetty ನಾಯಕನಾಗಿ ನಟಿಸುತ್ತಿರುವ Jai Hanuman ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದ್ದು, ಈ ಚಿತ್ರದಲ್ಲಿ ಅವರು ಅಭಿನಯಿಸಲಿದ್ದಾರೆ. ಈ ಕಾರಣದಿಂದಾಗಿ ಸದ್ಯಕ್ಕೆ ನಿರ್ದೇಶನದಿಂದ ಸ್ವಲ್ಪ ದೂರ ಉಳಿಯಲಿದ್ದಾರೆ ಎನ್ನಲಾಗಿದೆ. ಆದರೆ, ಶೂಟಿಂಗ್ ನಡುವೆಯೇ ಕಥೆ ಬರವಣಿಗೆ ಮುಂದುವರಿಸಿ, ಮುಂದಿನ ಎರಡು ವರ್ಷಗಳಲ್ಲಿ ಹೊಸ ಸಿನಿಮಾ ಸೆಟ್ಟೇರಲಿದೆ ಎಂಬ ಮಾಹಿತಿ ಹೊರಬಂದಿದೆ.
ಇದರ ಮಧ್ಯೆ ಮತ್ತೊಂದು ವಿಚಾರವೂ ಚರ್ಚೆಗೆ ಗ್ರಾಸವಾಗಿದೆ. Rishab Shetty ತಮ್ಮ ಸಾಮಾಜಿಕ ಜಾಲತಾಣದಲ್ಲಿ Hombale Films ಅನ್ನು ಅನ್‌ಫಾಲೋ ಮಾಡಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಆದರೆ, ಇದೇ ವೇಳೆ ಸಂಸ್ಥೆಯ ಮುಖ್ಯಸ್ಥ Vijay Kiragandur ಅವರನ್ನು ಅವರು ಇನ್ನೂ ಫಾಲೋ ಮಾಡುತ್ತಿರುವುದು ಗಮನಾರ್ಹವಾಗಿದೆ. ಈ ಬೆಳವಣಿಗೆಗಳಿಂದ ಅವರ ಮುಂದಿನ ಯೋಜನೆ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…