ಬೆಂಗಳೂರು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್ ಒಂದರಲ್ಲಿ ಜು.22 ಬೆಳಗ್ಗೆ ವಕೀಲೆಗೆ ಚಾಕು ಇರಿದು ಕೊಲೆಗೆ ಯತ್ನಿಸಲಾಗಿದೆ. ಕೂಡಲೆ ಹಲಸೂರು ಗೇಟ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ. ಜಯರಾಮರೆಡ್ಡಿ ಚಾಕು ಇರಿದ ಆರೋಪಿ.
ವಕೀಲೆ ವಿಮಲಾ ಮತ್ತು ಆರೋಪಿ ಜಯರಾಮ ಸ್ನೇಹಿತರು. ವಕೀಲೆ ವಿಮಲಾ ಜೊತೆ ಕಳೆದ ಖಾಸಗಿ ಕ್ಷಣಗಳನ್ನು ಜಯರಾಮ ವಿಡಿಯೋ ಮಾಡಿಕೊಂಡಿದ್ದಾನೆ. ಅಲ್ಲದೆ ಜಯರಾಮ ಸ್ನೇಹಿತೆ ವಿಮಲಾ ಬಳಿಯಿಂದ ಹಂತಹಂತವಾಗಿ ಒಂದೂವರೆ ಕೋಟಿಗಿಂತಲೂ ಹೆಚ್ಚು ಹಣ ಪಡೆದಿದ್ದಾನೆ. ನಂತರ ಹೆಜ್ಜಾಲ ಬಳಿ ಇರುವ ಜಾಗದ ವಿಚಾರವಾಗಿ ಇಬ್ಬರಲ್ಲಿ ಕಿರಿಕ್ ಆಗಿತ್ತು.
ಬಳಿಕ ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು ಜಾಗದ ವಿಚಾರವಾಗಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ ಇಬ್ಬರೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಆರೋಪಿ ಜಯರಾಮ ಸ್ನೇಹಿತೆ ವಿಮಲಾಗೆ ಕೋರ್ಟ್ ಹಾಲ್ 1ರಲ್ಲಿ ಚಾಕು ಇರಿದಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…