Categories: CrimeLatest

ರಾಂಗ್ ಕಾಲ್‌ನಿಂದ ಆರಂಭವಾದ ಪ್ರೇಮಕಥೆ; ಗಂಡನ ಹತ್ಯೆಗೆ ಸಂಚು! ಪಂಚಾಯಿತಿಯಲ್ಲಿ ಬಯಲಾಯ್ತು ಕಿಲಾಡಿ ಪತ್ನಿಯ ಪ್ಲಾನ್

ಒಂದೇ ಒಂದು ರಾಂಗ್ ಕಾಲ್ ಹತ್ತು ವರ್ಷಗಳ ಸುಖಿ ದಾಂಪತ್ಯವನ್ನು ಛಿದ್ರಗೊಳಿಸಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಕ್ಷೇತ್ರದಲ್ಲಿ ಬೆಳಕಿಗೆ ಬಂದಿದೆ. ರಾಂಗ್ ಕಾಲ್ ಮೂಲಕ ಪರಿಚಯವಾದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ ಮಹಿಳೆಯೊಬ್ಬಳು, ತನ್ನ ಪತಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾಳೆ ಎಂಬ ಆರೋಪ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಚಿತ್ತೂರು ಜಿಲ್ಲೆಯ ಚಿರಂಜೀವಿ ಮತ್ತು ಶೋಭಾ ದಂಪತಿಗೆ ಹತ್ತು ವರ್ಷಗಳ ಹಿಂದೆ ವಿವಾಹವಾಗಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಸುಖವಾಗಿ ಸಾಗುತ್ತಿದ್ದ ಕುಟುಂಬ ಜೀವನಕ್ಕೆ ಸುಮಾರು ಮೂರು ತಿಂಗಳ ಹಿಂದೆ ಬಂದಿದ್ದ ಒಂದು ರಾಂಗ್ ಕಾಲ್ ತಿರುವು ನೀಡಿದೆ. ಗುಂಟೂರು ಜಿಲ್ಲೆಯ ಬಾಲಾಜಿ ನಾಯಕ್ ಎಂಬಾತನೊಂದಿಗೆ ಪರಿಚಯ ಬೆಳೆದು, ಅದು ಬಳಿಕ ಪ್ರೇಮ ಸಂಬಂಧಕ್ಕೆ ತಿರುಗಿದೆ ಎನ್ನಲಾಗಿದೆ. ಬಳಿಕ ಶೋಭಾ, ಗಂಡ ಹಾಗೂ ಮಕ್ಕಳನ್ನು ತೊರೆದು ಬಾಲಾಜಿ ನಾಯಕ್ ಜೊತೆಗೆ ತೆರಳಿದ್ದಳು. ಈ ಸಂಬಂಧ ಚಿರಂಜೀವಿ ಗುಡುಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ನಡುವೆ, ಪತಿಯೇ ತಮ್ಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಭಾವಿಸಿದ ಶೋಭಾ, ಆತನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಇತ್ತೀಚೆಗೆ ನಡೆದಿದ್ದ ಮತ್ತೊಂದು ಹತ್ಯೆ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಚಿರಂಜೀವಿ ಎಚ್ಚರಿಕೆಯಿಂದ ನಡೆದುಕೊಂಡಿದ್ದು, ತನ್ನ ಪ್ರಾಣಕ್ಕೆ ಅಪಾಯವಿದೆ ಎಂಬ ಅನುಮಾನದಿಂದಲೇ ಸುರಕ್ಷತೆಯೊಂದಿಗೆ ಪತ್ನಿಯ ಪತ್ತೆಗೆ ಮುಂದಾಗಿದ್ದರು.

ಕೊನೆಗೆ ಶೋಭಾ ಮತ್ತು ಬಾಲಾಜಿ ನಾಯಕ್ ಇಬ್ಬರೂ ಬೆಂಗಿಲಪಲ್ಲಿಯಲ್ಲಿ ವಾಸಿಸುತ್ತಿದ್ದು, ದೇವಸ್ಥಾನದಲ್ಲಿ ವಿವಾಹವಾಗಿರುವ ಮಾಹಿತಿ ಚಿರಂಜೀವಿಗೆ ಲಭಿಸಿದೆ. ತಕ್ಷಣವೇ ಬಂಧುಗಳು ಹಾಗೂ ಗ್ರಾಮಸ್ಥರ ನೆರವಿನಿಂದ ಇಬ್ಬರನ್ನೂ ಗ್ರಾಮ ಪಂಚಾಯಿತಿ ಮುಂದೆ ಕರೆತರಲಾಗಿದ್ದು, ಪೊಲೀಸರಿಗೂ ಮಾಹಿತಿ ನೀಡಲಾಗಿದೆ.

ಪಂಚಾಯಿತಿಯ ವೇಳೆ ನಡೆದ ಚರ್ಚೆಯಲ್ಲಿ ಬಾಲಾಜಿ ನಾಯಕ್, “ಚಿರಂಜೀವಿಯನ್ನು ಹತ್ಯೆ ಮಾಡುವ ಯೋಜನೆ ಶೋಭಾಳದ್ದೇ” ಎಂದು ಹೇಳಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ಹೇಳಿಕೆ ಗ್ರಾಮಸ್ಥರನ್ನು ಬೆಚ್ಚಿಬೀಳುವಂತೆ ಮಾಡಿದೆ.

ಪ್ರಕರಣ ಸಂಬಂಧ ಕುಪ್ಪಂ ಡಿಎಸ್ಪಿ ಪಾರ್ಥಸಾರಥಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಆರಂಭದಲ್ಲಿ ದೂರುಗೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಹಾಗೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂಬ ಆರೋಪದ ಹಿನ್ನೆಲೆ ಸ್ಥಳೀಯರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕವೇ ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

2 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

3 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago