ಪ್ರೀತಿಸಿದ ಹುಡುಗಿಯನ್ನ ಪ್ರಿಯಕರನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಾಲಿನಿ ಎಂಬಾಕೆಯೇ ಕೊಲೆಯಾದ ಯುವತಿ, ಶಾಲಿನಿ ಮತ್ತು ಆಕೆಯ ಪ್ರಿಯಕರ ಆರೋಪಿ ಮನೋಜ್ ಇಬ್ಬರು ಪ್ರೀತಿ ಮಾಡುತ್ತಿದ್ದರು. ಆದರೆ ಶಾಲಿನಿಗೆ ಬೇರೆ ಮದುವೆ ಫಿಕ್ಸ್ ಮಾಡಲಾಗಿತ್ತು. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಕೂಡ ಆಗಿತ್ತು. ಮಾರ್ಚ್.14 ಸಂಜೆ ಶಾಲಿನಿ ನಿವಾಸಕ್ಕೆ ಬಂದಿದ್ದ ಮನೋಜ್. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಇಬ್ಬರು ಭೇಟಿಯಾಗಿದ್ದಾರೆ. ಈ ವೇಳೆ ಮನೋಜ್ ‘ನೀನು ಒಪ್ಪಿಕೊಂಡಿದ್ದಿಯಾ ಮನೆಯವರು ತೋರಿಸಿದ ಹುಡುಗನನ್ನ ಎಂದು ಗಲಾಟೆ ಮಾಡಿದ್ದನಂತೆ. ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ನಂತರ ಅಲ್ಲಿಂದ ಕೆ.ಪಿ ಅಗ್ರಹಾರದ ಮನೆಗೆ ಹೋಗಿದ್ದ ಮನೋಜ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಮನೋಜ್ನನ್ನು ಕುಟುಂಬದವರು ಅಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಶಾಲಿನಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಆಕೆಯ ಕುಟುಂಬದವರು ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಇನ್ನು ರಾತ್ರಿಯೇ ಮೃತ ಶಾಲಿನಿಯನ್ನ ಅಸ್ಪತ್ರೆಗೆ ದಾಖಲು ಮಾಡಿಸಿದ್ದ ಕುಟುಂಬ, ಈ ವೇಳೆ ಯುವತಿಯ ಗುಪ್ತಾಂಗದಲ್ಲಿ ರಕ್ತಸ್ರಾವ ಹಾಗೂ ಗಾಯದ ಗುರುತು ಪತ್ತೆಯಾಗಿದೆ. ಸದ್ಯ ವೈದ್ಯಕೀಯ ಪರೀಕ್ಷೆ ವೇಳೆ ಬಲವಂತದ ಲೈಂಗಿಕ ಕ್ರಿಯೆ ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…