ವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ತಾನಾಗಿಯೇ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದ್ರಾಬಾದ್ ನ ಗಚ್ಚಿಬೌಲಿಯಲ್ಲಿ ನಡೆದಿದೆ.
ವೇಗವಾಗಿ ಬರುತ್ತಿದ್ದ ಆರ್ ಟಿಸಿ ಬಸ್ ಕೊಂಡಾಪುರ ಕ್ರಾಸ್ರೋಡ್ಸ್ನಲ್ಲಿ ಸ್ವಲ್ವ ವೇಗವನ್ನು ಕಡಿಮೆ ಮಾಡುತ್ತಿದ್ದಂತೆಯೇ ಹಠಾತ್ತನೇ ಬಂದ ವ್ಯಕ್ತಿಯೊಬ್ಬ ತಾನಾಗಿಯೇ ಬಸ್ ನ ಚಕ್ರದಡಿ ಮಲಗಿಕೊಂಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಆತನನ್ನು ಹೊರಗೆಳೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಆತ ಸಾವನ್ನಪ್ಪಿದ್ದಾನೆ. ಮೃತನನ್ನು ಪಶ್ಚಿಮ ಬಂಗಾಳ ಮೂಲದ ಬಿಸು ರಜಬ್ ಎಂದು ಗುರುತಿಸಲಾಗಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇಂತಹ ಜೀವ ತೆಗೆದುಕೊಳ್ಳುವ ಹಿಂದಿನ ಕಾರಣ ಇನ್ನೂ ತಿಳಿದಿಲ್ಲ. ಆದರೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ವಿಡಿಯೋವನ್ನು ಐಪಿಎಸ್ ಅಧಿಕಾರಿ ವಿ. ಸಿ. ಸಜ್ಜನರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಯಾರೂ ಕೂಡಾ ಇಂತಹ ಕೆಲಸಕ್ಕೆ ಮುಂದಾಗದಂತೆ ಜನರಲ್ಲಿ ಮನವಿ ಮಾಡಿದ್ದಾರೆ.

Related News

error: Content is protected !!