Latest

ಪಿಸ್ತೂಲ್ ಹಿಡಿದು ವ್ಯಕ್ತಿ ಓಡಾಟ; ಹಿಡಿಯಲು ಹೋದಾಗ ಕತ್ತು ಇರಿದುಕೊಂಡ ಆರೋಪಿ!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಒಂದು ಕೈನಲ್ಲಿ ಪಿಸ್ತೂಲು, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದು ಜನರನ್ನು ಭಯಭೀತಿಗೊಳಿಸಿದ್ದು, ಪೊಲೀಸರು ಹಾಗೂ ಜನ ಹಿಡಿಯಲು ಹೋದಾಗ ತನ್ನ ಕತ್ತು ಸೀಳಿಕೊಂಡಿದ್ದಾನೆ.
ಮಾರ್ಚ್ ಹದಿನಾರು ರಂದು ಸಂಜೆ ದೆಹಲಿಯ ನಾತು ಕಾಲೋನಿ ಚೌಕಿಯಲ್ಲಿ ಈ ಘಟನೆ ನಡೆದಿದ್ದು, ಕೃಷನ್ ಶೇರವಾಲ್ ಎಂಬಾತ ಕತ್ತಿ ಹಾಗೂ ಚಾಕು ಹಿಡಿದು ಅಡ್ಡಾಡಿದ್ದಾನೆ. ಇದರಿಂದ ಭಯಭೀತರಾದ ಜನ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಕೆಲವರು ಕೂಡಲೇ ಪೊಲೀಸರಿಗೂ ಸಹ ಈ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿಯೇ ಆರೋಪಿ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದ ಎನ್ನಲಾಗಿದ್ದು, ಪೊಲೀಸರು ಆತನನ್ನು ಸುತ್ತುವರೆದ ವೇಳೆ ಕತ್ತಿಯಿಂದ ತನ್ನ ಕತ್ತನ್ನು ಇರಿದುಕೊಂಡಿದ್ದಾನೆ.
ಇದರ ಪರಿಣಾಮವಾಗಿ ಆತ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾನೆ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago