Latest

ಪಿಜಿಯಲ್ಲಿ ಬೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸೆದ ಕಾಮುಕ!

ಬೆಂಗಳೂರು, ಆಗಸ್ಟ್ 13: ಬೆಂಗಳೂರಿನಲ್ಲಿ ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ದುಷ್ಕರ್ಮಿಯೊಬ್ಬ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ನಗರದ ಜುಡಿಷಿಯಲ್ ಲೇಔಟ್ ಪ್ರದೇಶದಲ್ಲಿರುವ ಪೇಯಿಂಗ್ ಗೇಸ್ಟ್ (ಪಿಜಿ) ವಸತಿಗೃಹದಲ್ಲಿ ನಡೆದಿದೆ. ಬೆಸ್ಕಾಂನಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಮಹಿಳೆ ಅಲ್ಲೇ ವಾಸವಾಗಿದ್ದರು.

ಮಾಹಿತಿಯಂತೆ, ಘಟನಾ ದಿನ ದುಷ್ಕರ್ಮಿ ಚಾಕು ಹಿಡಿದು ನೇರವಾಗಿ ಮಹಿಳೆಯ ಕೊಠಡಿಗೆ ನುಗ್ಗಿ, ಕುತ್ತಿಗೆಗೆ ಚಾಕು ಇಟ್ಟು ಬೆದರಿಕೆ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ದೌರ್ಜನ್ಯ ಬಳಿಕ, ಮಹಿಳೆಯ ಮೊಬೈಲ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯ ಬಗ್ಗೆ ಮಹಿಳೆ ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು ಹುಡುಕಾಟ ಆರಂಭಿಸಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

18 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

23 hours ago

₹20 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ!

ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…

23 hours ago

ವಿವಾಹಿತ ಮಹಿಳೆ ಜೊತೆ ಬಾಯ್‌ಫ್ರೆಂಡ್‌ ಪರಾರಿ? ಕಣ್ಣೀರಿಟ್ಟ ದೆಹಲಿ ಬ್ಲಾಗರ್; “ನನ್ನನ್ನು ಬಿಟ್ಟು ಆಕೆಯಲ್ಲೇನಿತ್ತು?”

ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…

23 hours ago

ನಕಲಿ ಮಾಲೀಕರನ್ನು ನಿಲ್ಲಿಸಿ ₹1.08 ಕೋಟಿ ಮೌಲ್ಯದ ಜಮೀನು ಮಾರಾಟ: ನಾಲ್ವರ ವಿರುದ್ಧ FIR

ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…

1 day ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ; ವಿಚಾರಣೆಯಲ್ಲಿ ಸ್ಫೋಟಕ ಅಂಶಗಳ ಉಲ್ಲೇಖ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…

2 days ago