ಹುಬ್ಬಳ್ಳಿ: ಕೆಲಸದ ಸಂಬಂಧಿತ ವಿಚಾರವೇ ಕೊನೆಗೆ ಮಾರಣಾಂತಿಕ ಹಲ್ಲೆಗೆ ಕಾರಣವಾಗಿದೆಯೆಂದು ಶಂಕಿಸಲಾಗಿದ್ದು, ಭಾನುವಾರ ಸಂಜೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿ ಶ್ರೀನಿವಾಸ್ ಎಂಬಾತನಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದಾನೆ.
ಮಾಹಿತಿಯಂತೆ, ಮೂರು ವರ್ಷಗಳ ಹಿಂದೆ ನಡೆದ ಒಂದು ಟೆಂಡರ್‌ನಲ್ಲಿ ಸಚಿನ್, ಸುನಿಲ್ ಸೇರಿದಂತೆ ಹಲವರು ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಶ್ರೀನಿವಾಸ್ ಕೂಡಾ ಆವೇ ಟೆಂಡರ್‌ನಲ್ಲಿ ಕೆಲಸ ಮಾಡಲು ಮುಂದಾಗಿದ್ದನು. ಇದರಿಂದ ಆಕ್ರೋಶಗೊಂಡ ಆರೋಪಿಗಳು ತಮ್ಮ ಕೆಲಸಕ್ಕೆ ಅಡ್ಡಿಯಾಗುತ್ತಾನೆಂಬ ಕಾರಣದಿಂದ ಶ್ರೀನಿವಾಸ್ ಮೇಲೆ ದಾಳಿ ನಡೆಸಿದರೆಂದು ಹೇಳಲಾಗುತ್ತಿದೆ.
ಚಾಕುಗಳಿಂದ ಹಲ್ಲೆ ನಡೆಸಿದ ಮೂವರು ಆರೋಪಿ ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಶ್ರೀನಿವಾಸ್ ಅವರ ಕಣ್ಣು ಹಾಗೂ ದೇಹದ ಹಲವೆಡೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಹುಬ್ಬಳ್ಳಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆದಿದೆ. ವರದಿ: ಶಿವರಾಜ್ ಪಿ.ಆರ್.
ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾರಿ ಮಳೆಗೆ ನಾಡಕಚೇರಿ ಕಟ್ಟಡ ಕುಸಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಕಟ್ಟಡ ಕುಸಿತದ ವೇಳೆ…
ಕೋಲಾರ್ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆಯ ಪಿಎಸ್‌ಐ ಸುನಿಲ್ ಕುಮಾರ್ ಲಂಚದ ಆರೋಪ. ಮೂಲಗಳ ಮಾಹಿತಿ ಪ್ರಕಾರ,…
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ್ ಸರ್ಕಲ್ ಬಳಿ ದ್ವಿಚಕ್ರ ವಾಹನ ಮತ್ತು ಪೊಲೀಸ್ ಜೀಪ್ ನಡುವೆ ಸಂಭವಿಸಿದ ಭೀಕರ…
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಸಂಭವಿಸಿದ ಐದು ವರ್ಷದ ಪುಟ್ಟ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವು ರಾಜ್ಯವನ್ನೇ ಬೆಚ್ಚಿಬಿಟ್ಟಿತ್ತು. ಮನೆಯ…
ಧಾರವಾಡ: ಹುಬ್ಬಳ್ಳಿ-ಧಾರವಾಡ ಬಿ ಆರ್ ಟಿ ಎಸ್ ಕಾರಿಡಾರ್‌ನ ಪಿಬಿ ರಸ್ತೆ ಮೇಲೆ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ…
ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಖೈದಿ ಇಂದು ಮುಂಜಾನೆ ಆಸ್ಪತ್ರೆಯಿಂದ ಪರಾರಿಯಾದ ಘಟನೆ ಭಾರೀ ಸಂಚಲನ…