ಕೊಚ್ಚಿಯಲ್ಲಿ ಚಲಿಸುವ ಕಾರಿನೊಳಗೆ 19 ವರ್ಷದ ಮಾಡೆಲ್ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ ದಕ್ಷಿಣ ಪೊಲೀಸರು ಮಹಿಳೆ ಸೇರಿದಂತೆ ನಾಲ್ವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಗುರುವಾರ ತಡರಾತ್ರಿ ಕೇರಳದ ಕೊಚ್ಚಿಯ ಬಾರ್‌ನಲ್ಲಿ ನಡೆದ ಡಿಜೆ ಪಾರ್ಟಿಯಲ್ಲಿ ಭಾಗಿಯಾಗಿದ್ದ 19 ವರ್ಷದ ಮಾಡೆಲ್‌ಗೆ ಮಾದಕ ದ್ರವ್ಯ ನೀಡಿ ಮೂವರು ಪುರುಷರು ಕಾರಿನಲ್ಲಿ ಕರೆದೊಯ್ದಿದ್ದಾರೆ.
ಆರೋಪಿಗಳು ತಡರಾತ್ರಿಯವರೆಗೆ ನಗರವನ್ನೆಲ್ಲಾ ಸುತ್ತಾಡಿದ್ದಾರೆ. ಈ ವೇಳೆ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ ನಡೆಸಿ ಆಕೆಯ ಮನೆಯ ಬಳಿ ಬಿಟ್ಟು ಹೋಗಿದ್ದರು.
ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಇನ್ಫೋಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಪ್ರಕರಣವನ್ನು ಎರ್ನಾಕುಲಂ ಸೌತ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಅಪರಾಧ ನಡೆದಿರುವುದಾಗಿ ವರದಿಯಾಗಿದೆ.
ದಕ್ಷಿಣ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತ ಮಹಿಳೆ ರಾಜಸ್ಥಾನ ಮೂಲದವರಾಗಿದ್ದು, ವೃತ್ತಿಯಲ್ಲಿ ಆಕೆಯೂ ಮಾಡೆಲ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…