Latest

ತನ್ನ ಲವರ್ ನ ಜೊತೆ ಮಗಳ ಮದುವೆ ಮಾಡಿಸಿದ ತಾಯಿ.

ಮದುವೆಯಾಗಿ 15 ವರ್ಷದ ಮಗಳಿದ್ದರೂ ಬೇರೊಬ್ಬ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ತನ್ನ ಅನೈತಿಕ ಸಂಬಂಧಕ್ಕೆ ಅನುಕೂಲವಾಗಲೆಂದು ಮಗಳ ಜೀವನವನ್ನೇ ಹಾಳು ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆಯಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಆಕೆಯ ತಾಯಿ ತನ್ನ 28 ವರ್ಷದ ಪ್ರೇಮಿಯೊಂದಿಗೆ ಬಲವಂತವಾಗಿ ವಿವಾಹ ಮಾಡಿದ್ದಾಳೆ. ಅಲ್ಲದೆ, ತನ್ನ ಪ್ರಿಯಕರನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಳ್ಳಲು ತಾಯಿಯೇ ಮಗಳನ್ನು ಒತ್ತಾಯಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
15 ವರ್ಷದ ಬಾಲಕಿ ತನ್ನ ತಾಯಿ ತನಗೆ ನೀಡುತ್ತಿರುವ ಕಿರುಕುಳದ ಬಗ್ಗೆ ತನ್ನ ಗೆಳತಿಯೊಂದಿಗೆ ಹೇಳಿಕೊಂಡಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ವಿಷಯವನ್ನು ಮಹಿಳಾ ಸಾಮಾಜಿಕ ಕಾರ್ಯಕರ್ತೆಯೊಬ್ಬರಿಗೆ ತಿಳಿಸಿದ್ದಾರೆ. ಆಕೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
15 ವರ್ಷದ ಬಾಲಕಿಯೊಂದಿಗೆ ಮದುವೆಯಾದ ಯುವಕ ಆಕೆಯ ತಾಯಿಯ ದೂರದ ಸಂಬಂಧಿಯಾಗಿದ್ದು, ಆತನೊಂದಿಗೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದ ಮಹಿಳೆ ಆತನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿದರೆ ಆತ ತನ್ನ ಮನೆಯಲ್ಲೇ ಇರುತ್ತಾನೆ. ಆಗ ತಮ್ಮಿಬ್ಬರ ಅಕ್ರಮ ಸಂಬಂಧದ ಬಗ್ಗೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ಈ ರೀತಿ ಮಾಡಿದ್ದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾಳೆ.
ಮಗಳಿಗೆ ಬೆದರಿಕೆ ಹಾಕಿದ ಆ ಮಹಿಳೆ ಈ ಮದುವೆಗೆ ಒಪ್ಪದಿದ್ದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಇದರಿಂದ ಹೆದರಿ ಆ ಬಾಲಕಿ ಮದುವೆಗೆ ಒಪ್ಪಿದ್ದಳು. ನವೆಂಬರ್ 6ರಂದು ಆ ಹುಡುಗಿಯನ್ನು ಅಹ್ಮದ್‌ನಗರದ ದೇವಸ್ಥಾನದಲ್ಲಿ ಮದುವೆ ಮಾಡಿಕೊಡಲಾಗಿತ್ತು. ಆ ಯುವಕ ಬಾಲಕಿಯೊಂದಿಗೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ. ಅದಕ್ಕೆ ಆಕೆ ವಿರೋಧಿಸಿದಾಗ ಆಕೆಯ ತಾಯಿ ಹೆದರಿಸಿ ಒಪ್ಪಿಸಿದ್ದಳು ಎಂದು ಹೇಳಲಾಗುತಿದೆ.
36 ವರ್ಷದ ಮಹಿಳೆ ಮತ್ತು ಆಕೆಯ 28 ವರ್ಷದ ಪ್ರೇಮಿಯನ್ನು ಪೋಕ್ಸೊ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

12 hours ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

12 hours ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

12 hours ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

12 hours ago

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರು ಆರೋಪಿಗಳಿಗೆ ಪೊಲೀಸರ ಗುಂಡೇಟು

ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…

12 hours ago

ಪ್ರಿಯಕರನ ಜೊತೆ OYO ರೂಂಗೆ ಬಂದ ಯುವತಿ ಅನುಮಾನಾಸ್ಪದ ಸಾವು: ಆಸ್ಪತ್ರೆಯಿಂದಲೇ ಪ್ರಿಯಕರ ಪರಾರಿ

ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…

12 hours ago