Corruption

“ಒಂದೇ ದಿನಕ್ಕೆ ಹೊಸ ರಸ್ತೆಯಲ್ಲಿ ಗುಂಡಿ! – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ”

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತೊಪ್ಪನಹಳ್ಳಿ ಗ್ರಾಮದಿಂದ ಚಾಮನಹಳ್ಳಿ ಗ್ರಾಮದತ್ತ ನಿರ್ಮಿಸಲಾದ ಹೊಸ ಡಾಂಬರ್ ರಸ್ತೆ ಕೇವಲ ಒಂದು ದಿನದಲ್ಲೇ ಹಾನಿಗೊಂಡಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಒಂದೇ ದಿನದಲ್ಲಿ ರಸ್ತೆಯಲ್ಲಿ ಗುಂಡಿ!

ಮಾರ್ಚ್ 15, 2025ರಂದು ಈ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದರೆ 16, 2025ರಂದೇ ಹೊಸ ರಸ್ತೆ ನಜ್ಜುಗುಜ್ಜಾಗಿದ್ದು, ಕೆಲವು ಭಾಗಗಳಲ್ಲಿ ಡಾಂಬರ್ ಬೇರ್ಪಟ್ಟಿದೆ. ಹೀಗಾಗಿ ಸ್ಥಳೀಯರು ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ಪ್ರತಿಕ್ರಿಯೆ

ಈ ಕುರಿತು ಕೋಲಾರ ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ. ಬಂಗಾರಪೇಟೆ ತಾಲೂಕು ಜೂನಿಯರ್ ಇಂಜಿನಿಯರ್ ಶ್ರೀನಿವಾಸ್ ಪ್ರತಿಕ್ರಿಯಿಸಿ, “ನಮಗೆ ಸರ್ಕಾರದಿಂದ ಅನುಮತಿ ಇರುವುದು 20 ಎಂಎಂ ರಸ್ತೆ ಮಾತ್ರ ಹಾಗಾಗಿ ವೊಂದು ಕಡೆ ಮಾತ್ರ ರಸ್ತೆ ಕಿತ್ತುಹೋಗಿರುವುದು ಗಮನಕ್ಕೆ ಬಂದಿದೆ, ಕೆಲವೊಮ್ಮೆ ಇಂತಹ ಘಟನೆ ನಡೆಯುವುದು ಸಹಜ ಕೂಡಲೇ ಸರಿಪಡಿಸಲು ಕಳುಹಿಸಿಕೊಡಲಾಗಿದೆ” ಎಂದು ಹೇಳಿದ್ದಾರೆ.

ಸಾರ್ವಜನಿಕರ ಆಕ್ರೋಶ

ಆದರೆ ಸ್ಥಳೀಯರ ಪ್ರಕಾರ, ಈ ಹೊಸ ರಸ್ತೆಯ ಹಲವು ಭಾಗಗಳಲ್ಲಿ ಬಿರುಕು, ಗುಂಡಿ ಕಾಣಿಸಿಕೊಂಡಿದೆ. ಗುಣಮಟ್ಟವಿಲ್ಲದ ಕಾಮಗಾರಿ, ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರದ ಸುತ್ತ ಒತ್ತಿಹೇಳಿದ ಅವರು, ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ವರದಿ: ರೋಶನ್

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

17 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

21 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago