Categories: CrimeLatestMore

ಮಗಳ ಸ್ನೇಹಿತೆಯನ್ನು ಮನೆಗೆ ಕರೆಸಿ ಅತ್ಯಾಚಾರ ಮಾಡಿದ ಪಾಪಿ ತಂದೆ..!

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ದಾರುಣ ಘಟನೆ ವರದಿಯಾಗಿದೆ.

ಆರೋಪಿಗೆ ಮಧು ಎಂಬುದು ಹೆಸರು. ಸೋಮವಾರ ಸಂಜೆ ತನ್ನ ಮಗಳ ಸ್ನೇಹಿತೆಯಾದ ಬಾಲಕಿಯನ್ನು ದೂರವಾಣಿ ಮೂಲಕ ಕರೆಸಿ ಮನೆಯೊಳಕ್ಕೆ ಆಹ್ವಾನಿಸಿದ ಎಂದು ತಿಳಿದುಬಂದಿದೆ.

ಬಾಲಕಿ ಬಂದ ನಂತರ ಚಾಕೋಲೇಟ್ ನೀಡಿ, ಮತ್ತೆ ತನ್ನ ಮಗಳನ್ನು ಚಾಕೋಲೇಟ್ ತರುವಂತೆ ಹೇಳಿ ಹೊರಗೆ ಕಳಿಸಿದ್ದಾನೆ. ಈ ಮಧ್ಯೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಪೋಷಕರು ತಮ್ಮ ಮಗಳನ್ನು ಕಳುಹಿಸಲು ಕರೆ ಮಾಡಿದಾಗ, ಆರೋಪಿಯು ಸರಿಯಾಗಿ ಮಾತನಾಡದೆ ಕರೆ ಕಟ್ ಮಾಡಿದ ಹಿನ್ನೆಲೆಯಲ್ಲಿ ಶಂಕೆ ಉಂಟಾದ ಪೋಷಕರು ತಕ್ಷಣ ಬಾಲಕಿಯ ಸ್ನೇಹಿತೆಯ ಮನೆಗೆ ತೆರಳಿ ವಿಚಾರಣೆ ನಡೆಸಿದರು.

ಅಲ್ಲಿದ್ದಾಗ ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಪೋಷಕರಿಗೆ ಹೇಳಿಕೊಂಡಿದ್ದಾಳೆ. ತಕ್ಷಣವೇ ಪೋಷಕರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಧುಡಿಯು ಹೋದರಂತೆ.

ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಘಟನೆ ಸಂಬಂಧ ಇನ್ನೂ ಹೆಚ್ಚಿನ ತನಿಖೆ ಮುಂದುವರಿದಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

18 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago