Latest

ತಂದೆಯನ್ನೇ ಕೊಲೆಗೈದು ತುಂಡುತುಂಡಾಗಿ ಕತ್ತರಿಸಿದ ಪಾಪಿ ಮಗ.

ತಂದೆಯನ್ನೇ ಮಗ ಕೊಲೆ ಮಾಡಿ ದೇಹವನ್ನು ಕತ್ತರಿಸಿ ಬಿಸಾಡಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದಿದೆ.
ಮೃತ ವ್ಯಕ್ತಿ ಮಾಜಿ ನೌಕಾಪಡೆಯ ಉಜ್ವಲ್ ಚಕ್ರವರ್ತಿ (55) ಎಂದು ಗುರುತಿಸಲಾಗಿದೆ. ಅನುಮಾನದ ಆಧಾರದ ಮೇಲೆ ಪೊಲೀಸ​ರು ತಾಯಿ-ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
ಮೃತನ ಪುತ್ರ ಜಾಯ್​ ಪಾಲಿಟೆಕ್ನಿಕ್‌ ಓದುತ್ತಿದ್ದಾನೆ. ಪರೀಕ್ಷಾ ಶುಲ್ಕ್​ ತುಂಬಲು 3,000 ರೂಪಾಯಿ ತಂದೆ ಬಳಿ ಕೇಳಿದ್ದಾನೆ. ಉಜ್ವಲ್ ಚಕ್ರವರ್ತಿ ಹಣ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಜಾನ್​ ತಂದೆ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಶ್ಯಾಮಲಿ ಮತ್ತು ಮಗ ಜಾಯ್ ನನ್ನು ಪೊಲೀಸರು ಬಂಧಿಸಿದ್ದಾರೆ.
12 ವರ್ಷಗಳ ಹಿಂದೆ ಉಜ್ವಲ್ ಚಕ್ರವರ್ತಿ ಅವರು ನೌಕಪಡೆಯಿಂದ ನಿವೃತ್ತಿಯಾಗಿದ್ದರು. ತಂದೆಯನ್ನು ಕೊಲೆಗೈದ ಬಳಿಕ ತಾಯಿಯ ನೆರವಿನೊಂದಿಗೆ ಮೃತದೇಹವನ್ನು ಮಗ ಬಾತ್​​ ರೂಮ್​​ ಗೆ ಎಳೆದುಕೊಂಡು ಹೋಗಿದ್ದನು. ಅಲ್ಲಿಯೇ ಆರೋಪಿ ತನ್ನ ಕಾರ್ಪೆಂಟ್ರಿ ಕ್ಲಾಸ್ ಕಿಟ್ ಬ್ಯಾಗ್‌ ನಿಂದ ಹ್ಯಾಕ್ಸಾ ಬ್ಲೆಡ್​​ ಅನ್ನು ಬಳಸಿ ದೇಹವನ್ನು ಆರು ತುಂಡುಗಳಾಗಿ ಕತ್ತರಿಸಿದ್ದ. ನಂತರ ಅವುಗಳನ್ನು ತನ್ನ ಮನೆಯ 500 ಮೀಟರ್​ ದೂರದ ಪ್ರದೇಶದಲ್ಲಿ ಎಸೆದಿದ್ದನು. ಸದ್ಯ ಮೃತದೇಹದ ಭಾಗಗಳಿಗಾಗಿ ಹುಡುಕಾಟ ನಡೆಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago