ಯಾದಗಿರಿ: ನರೇಗಾ (ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಯೋಜನೆಯಡಿ ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಭಾರೀ ಅವ್ಯವಹಾರದ ಸುದ್ದಿ ಹೊರಬಿದ್ದಿದೆ. ಮಹಿಳಾ ಕಾರ್ಮಿಕರ ಹೆಸರಿನಲ್ಲಿ ಪುರುಷರು ಸೀರೆ ತೊಟ್ಟು ಕೆಲಸಕ್ಕೆ ಹಾಜರಾದಂತೆ ತೋರಿಸಿ, ಸರ್ಕಾರದ ಹಣ ಎಗರಿಸಿರುವ ಶಂಕೆ ಉಂಟಾಗಿದೆ.
ಗ್ರಾಮದ ಹತ್ತಿರದ ಪುಜಾರಿ ಎಂಬಾತನ ಹೊಲದ ಬಳಿ ನಾಲೆ ಹೂಳೆತ್ತುವ ಕಾಮಗಾರಿಗೆ ಸಂಬಂಧಿಸಿದಂತೆ ನಕಲಿ ಬಿಲ್ ತಯಾರಿಸಿ ಹಣ ವಂಚಿಸಲಾಗಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ, ನೈಜ ಕಾರ್ಮಿಕರು ಕೆಲಸಕ್ಕೆ ಹಾಜರಾಗದೇ, ಪುರುಷರು ಮಹಿಳೆಯರ ಹೆಸರಿನಲ್ಲಿ ಸೀರೆ ತೊಟ್ಟು ಫೋಟೋ ತೆಗೆಯಲ್ಪಟ್ಟಿದ್ದು, ಅದನ್ನೇ ಎನ್‌ಎಂಎಂಎಸ್ (ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್) ಗೆ ಅಪ್ಲೋಡ್ ಮಾಡಲಾಗಿದೆ.
ಸರ್ಕಾರದ ನಿಯಮಾನುಸಾರ, ಕಾರ್ಮಿಕರ ದಿನಪತ್ರಿ ಹಾಜರಾತಿಯನ್ನು ಎನ್‌ಎಂಎಂಎಸ್ ಮೂಲಕ ದಾಖಲಿಸಬೇಕು. ಆದರೆ ಈ ಮೂಲಕವನ್ನೇ ದುರ್ಬಳಕೆ ಮಾಡಲಾಗಿದ್ದು, ಕೆಲ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಈ ವಂಚನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧವಾಗಿ ಪಂಚಾಯತ್ ಇಲಾಖೆ ಬಿಎಫ್‌ಟಿ ಅಧಿಕಾರಿ ವಿರೇಶ ಮೇಲೆ ಗಂಭೀರ ಆರೋಪಗಳು ಕೇಳಿಬಂದಿವೆ.
ಸ್ಥಳೀಯರು ಹಾಗೂ ಸಾಮಾಜಿಕ ಕಾರ್ಯಕರ್ತರು ಈ ಬಗ್ಗೆ ಆತಂಕ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಹಾಗೂ ಎಸಿಬಿಗೆ ದೂರು ನೀಡಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಹೊತ್ತಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…