Latest

ಶಿಕ್ಷಕಿಯನ್ನು ಪ್ರೀತಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಶಿಕ್ಷಕಿಯೊಂದಿಗೆ ಪ್ರೇಮ ವೈಫಲ್ಯದಿಂದ ಮನನೊಂದ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಅಂಬತ್ತೂರಿನಲ್ಲಿ ಜರುಗಿದೆ.
ಹನ್ನೆರಡನೇ ತರಗತಿ ಮುಗಿಸಿ ವಿದ್ಯಾರ್ಥಿಯು ಕಾಲೇಜು ಪ್ರವೇಶ ಕೌನ್ಸೆಲಿಂಗ್​ಗೆ ತೆರಳಿ ಮನೆಗೆ ವಾಪಸ್ ಬಂದಿದ್ದರು. ಆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಕಂಡ ಪೋಷಕರು ಆತನನ್ನು ರಕ್ಷಿಸಿ ಅಂಬತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗಮಧ್ಯೆದಲ್ಲೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾರೆ.
ವಿದ್ಯಾರ್ಥಿಯ ಸಾವಿನ ಬಗ್ಗೆ ಅನುಮಾನಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ನಂತರ ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು, ವಿದ್ಯಾರ್ಥಿಯ ಮೊಬೈಲ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ಹಲವು ಬೆಚ್ಚಿ ಬೀಳಿಸುವ ಸಂಗತಿಗಳು ಹೊರಬಿದ್ದಿವೆ.
ವಿದ್ಯಾರ್ಥಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾಗ ಅದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿ ಶರ್ಮಿಳಾ ಎಂಬುವವರು ಪರಿಚಯವಾಗಿತ್ತು. ಆ ಶಿಕ್ಷಕಿ ನಡೆಸುತ್ತಿದ್ದ ಟ್ಯೂಷನ್​ಗೂ ವಿದ್ಯಾರ್ಥಿ ಸೇರಿಕೊಂಡಿದ್ದರು. ನಂತರ ಇವರಿಬ್ಬರ ಪರಿಚಯ ಸ್ನೇಹ ಮತ್ತು ಪ್ರೇಮಕ್ಕೆ ತಿರುಗಿತ್ತು. ಆದರೆ, ಈ ನಡುವೆ ಶಿಕ್ಷಕಿಗೆ ಕುಟುಂಬಸ್ಥರು ಮದುವೆ ನಿಶ್ಚಯ ಮಾಡಿದ್ದರಿಂದ ಶಿಕ್ಷಕಿಯು ವಿದ್ಯಾರ್ಥಿಯೊಂದಿಗಿನ ಎಲ್ಲ ಸಂಪರ್ಕವನ್ನು ಕಡಿತಗೊಳಿಸಿದ್ದರು.
ವಿದ್ಯಾರ್ಥಿಯು ಪದೇ ಪದೇ ಶಿಕ್ಷಕಿಯನ್ನು ತನ್ನೊಂದಿಗೆ ಮಾತನಾಡಲು ಒತ್ತಾಯಿಸಿದ್ದರು. ಆದರೆ, ಶಿಕ್ಷಕಿ ಮಾತನಾಡುತ್ತಿರಲಿಲ್ಲ. ಇದರಿಂದ ಮನನೊಂದ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಶಿಕ್ಷಕಿ ಶರ್ಮಿಳಾ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

4 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

8 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

11 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

16 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago