Latest

ವಿದ್ಯುತ್ ಪ್ರವಹಿಸಿ ದಾರುಣ ಸಾವು ಕಂಡ ವಿದ್ಯಾರ್ಥಿ, ಸಾವಿನಲ್ಲೂ ಸಾರ್ಥಕತೆ ಮೆರೆದು ಮತ್ತಿಬ್ಬರ ಬಾಳಿಗೆ ಬೆಳಕಾಗಲಿರುವ ಜಿನೇಂದ್ರ..!

ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಗದ್ದೆಯಲ್ಲಿ ಬೋರ್ ವೆಲ್ ಪ್ರಾರಂಭ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮುಂಡಗೋಡದ ತಾಲೂಕ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟ ಘಟನೆ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಿನೇಂದ್ರ ಪಾರ್ಶ್ವನಾಥ ಬಸ್ತವಾಡ (18)ಎಂಬ ಯುವಕನೇ ದಾರುಣವಾಗಿ ಸಾವು ಕಂಡಿದ್ದಾನೆ.
ಇನ್ನೂ ಮೃತ ಯುವಕನ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ ಆತನ ಕುಟುಂಬದವರು ಶಿರಸಿಯ ನೇತ್ರ ಭಂಡಾರವನ್ನು ಸಂಪರ್ಕಿಸಿದ್ದಾರೆ ಆಗ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಶಿರಸಿಯ ಲಯನ್ಸ್ ನೇತ್ರ ಭಂಡಾರದವರು ಯುವಕನ ಎರಡು ಕಣ್ಣುಗಳನ್ನು ಸುರಕ್ಷಿತವಾಗಿ ಪಡೆದುಕೊಂಡು ಹೋಗಿದ್ದಾರೆ ಇದರಿಂದ ಯುವಕನು ಸಾವಿನಲ್ಲೂ ಸಾರ್ಥಕತೆ ಮೆರೆದು ಮತ್ತಿಬ್ಬರ ಬಾಳಿಗೆ ಬೆಳಕಾಗಲಿದ್ದಾನೆ.
ಯುವಕನ ಕುಟುಂಬದವರ ಕಾರ್ಯಕ್ಕೆ ತಾಲೂಕಿನಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ.
ವರದಿ: ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago