Latest

ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ವಿದ್ಯಾರ್ಥಿ ಅರೆಸ್ಟ್!

ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಗಿರಿನಗರ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಶುಭಂ ಎಂ ಆಜಾದ್ ಬಂಧಿತ ಆರೋಪಿ. ಈತ ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ಬಿಬಿಎ ಎಲ್​ಎಲ್​ಬಿ ಐದನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ.
ಕಾಲೇಜಿನ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಫಿಕ್ಸ್ ಮಾಡಿ ಕೃತ್ಯ ಎಸಗುತ್ತಿದ್ದ. 1200ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳನ್ನು ಆರೋಪಿ ಚಿತ್ರೀಕರಿಸಿರುವುದಾಗಿ ತಿಳಿದುಬಂದಿದೆ. ಸ್ನೇಹಿತೆಯರು ಜೊತೆಯಲ್ಲಿದ್ದಾಗಲು ಅವರ ಅರೆನಗ್ನ ಪೋಟೋ ತೆಗೆದಿದ್ದ. ಇತ್ತೀಚೆಗೆ ಕಾಲೇಜು ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಲು ಹೋದಾಗ, ಕ್ಯಾಮೆರಾ ನೋಡಿ ಯುವತಿಯರು ಚೀರಾಡಿದ್ದಾರೆ ಈ ವೇಳೆ ಆರೋಪಿ ಪರಾರಿಯಾಗಿದ್ದ. ಬಳಿಕ ಸಿಸಿಟಿವಿ ಪರಿಶೀಲಿಸಿದಾಗ ಶುಭಂ ಕೃತ್ಯ ಬೆಳಕಿಗೆ ಬಂದಿದೆ.
ಈ ಹಿಂದೆಯು ಆರೋಪಿ ಶುಭಂ ಇದೇ ರೀತಿ ಮಾಡಿ ಕ್ಷಮಾಪಣಾ ಪತ್ರ ಬರೆದುಕೊಟ್ಟಿದ್ದ. ಇಷ್ಟಾದರೂ ಮತ್ತೆ ತನ್ನ ಚಾಳಿ ಮುಂದುವರೆಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನ ಮೊಬೈಲ್​​ನಲ್ಲಿ 1200 ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳು ಪತ್ತೆಯಾಗಿವೆ. ಆರೋಪಿ ಬಳಿ ಮತ್ತೊಂದು ಮೊಬೈಲ್ ಇದ್ದು ಅದರಲ್ಲಿ ಮತ್ತಷ್ಟು ವಿಡಿಯೋಗಳು ಪತ್ತೆಯಾಗುವ ಸಾಧ್ಯತೆ ಇದೆ. ಸದ್ಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago