ಮಧ್ಯ ಪ್ರದೇಶದ ಶಾಸಕ ಹಾಗೂ ಮಾಜಿ ಸಚಿವರೊಬ್ಬರು ಟೀ ಮಾರಾಟಗಾರನಿಂದ ಮುಜುಗರ ಅನುಭವಿಸಿದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಜೆಪಿ ಶಾಸಕ ಕರಣ್ ಸಿಂಗ್ ವರ್ಮಾ ಅವರು ಸಿಹೋರ್ ಜಿಲ್ಲೆಯ ಇಚವಾರ್ ಪ್ರದೇಶದಲ್ಲಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿ, ಕಾರು ತಡೆದ ಟೀ ಮಾರಾಟಗಾರ 2018ರಿಂದ ಬಾಕಿ ಉಳಿಸಿಕೊಂಡಿದ್ದ ಟೀ ಕುಡಿದ ಹಣವನ್ನು ತಕ್ಷಣ ಪಾವತಿಸುವಂತೆ ಪಟ್ಟು ಹಿಡಿದನು.
ಚುನಾವಣೆ ಸಮೀಪಿಸುತ್ತಿದ್ದಂತೆ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದ್ದು, ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಶಾಸಕ ಕರಣ್ ಸಿಂಗ್ ವರ್ಮಾ ಕೂಡ ತಮ್ಮ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಈ ವೇಳೆ ಟೀ ವ್ಯಾಪಾರಿಯೊಬ್ಬರು ಶಾಸಕರನ್ನು ತಡೆದರು. ಬಾಕಿ ಮೊತ್ತವನ್ನು ಕೊಡುವಂತೆ ಒತ್ತಾಯಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
2018ರ ವಿಧಾನಸಭಾ ಚುನಾವಣೆಯ ನಂತರ ಕರಣ್ ಸಿಂಗ್ ವರ್ಮಾ ಟೀ ಮಾರಾಟಗಾರನಿಗೆ ನೀಡಬೇಕಾದ ಹಣ ಇದುವರೆಗೂ ಪಾವತಿಯಾಗಿಲ್ಲ ಎಂಬುದು ಬೆಳಕಿಗೆ ಬಂದಿದೆ. ಮಾಜಿ ಸಚಿವರೂ ಇಷ್ಟು ಸಾಲ ಮಾಡಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…