Latest

ಪ್ರತಿಭಟನೆಗೆಂದು ಫ್ರೀಡಂ ಪಾರ್ಕ್ ಗೆ ಬಂದ ಶಿಕ್ಷಕ ಅನುದಾನಿತ ಶಿಕ್ಷಕರಿಗೆ ಪಿಂಚಣಿ ನೀಡುವಂತೆ ಮನವಿ ಬರೆದು ಆತ್ಮಹತ್ಯೆ.

ಪ್ರತಿಭಟನೆಗೆ ಬಂದಿದ್ದ ಶಂಕರಪ್ಪ ಬೋರಡ್ಡಿ(47) ಎಂಬ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿನ್ನೆ(ಫೆ.22) ರಾತ್ರಿ ನಡೆದಿದೆ. ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕ ಶಂಕರಪ್ಪ ಬೆಂಗಳೂರಿಗೆ ಆಗಮಿಸಿದ್ದರು. ಆದ್ರೆ ಪ್ರತಿಭಟನೆಯಲ್ಲಿ ಭಾಗಿಯಾಗಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಶಂಕರಪ್ಪ ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರು. ಪಟ್ಟಣದಲ್ಲಿ ಗಣಿತ ಶಿಕ್ಷಕರಾಗಿದ್ದರು. ಮಂಗಳವಾರ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಂಕರಪ್ಪ ಪ್ರತಿಭಟನೆ ಬಳಿಕ ಶಿಕ್ಷಕರ ಸದನದಲ್ಲಿ ತಂಗಿದ್ದರು. ಬಳಿಕ ರೂಂನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಶಿಕ್ಷಕ ಶಂಕರಪ್ಪ ಬೋರಡ್ಡಿ ಮೃತದೇಹ ಊರಿಗೆ ರವಾನಿಸಲಾಗುತ್ತಿದೆ. ಶಂಕರಪ್ಪ, ಇದೇ ಫೆಬ್ರವರಿ 20 ರಂದು ಶಾಲೆ ಮುಗಿಸಿಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು. ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯ ಮೂಲದ ಬೆಂಗಳೂರಿನಲ್ಲಿರುವ ನಂದಿನಿ ಎನ್ನುವ ಮಹಿಳೆಗೆ 27 ಲಕ್ಷ ಹಣ ನೀಡಿದ್ದರ ಬಗ್ಗೆ ಉಲ್ಲೇಖಿಸಿದ್ದಾರೆ. ಶಂಕರಪ್ಪ, ಸಾಲ ಮಾಡಿ ಮಹಿಳೆಗೆ ಹಣ ನೀಡಿದ್ದ. ಜೊತೆಗೆ ಅನುದಾನಿತ ಶಿಕ್ಷಕರ ಸಮಸ್ಯೆ ಬಗ್ಗೆಯೂ ಉಲ್ಲೇಖಿಸಿದ್ದರು. ಅನುದಾನಿತ ಶಿಕ್ಷಕರಿಗೆ ಪಿಂಚಣಿ ನೀಡುವಂತೆ ಮನವಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

7 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

11 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago