ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ಸಮಾಜವೇ ತಲೆತಗ್ಗಿಸುವಂತಹ ಕ್ರೂರ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 2ರಂದು ಸಂಜೆ, ಸರ್ಕಾರಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ 35 ವರ್ಷದ ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಈ ದಾಳಿ ನಡೆದಿದೆ.
ಅಪರಿಚಿತ ವ್ಯಕ್ತಿಯೊಬ್ಬ ‘ದಾಹವಾಗಿದೆ, ಕುಡಿಯಲು ನೀರು ಕೊಡಿ’ ಎಂದು ಕೇಳಿ ವಿಶ್ವಾಸ ಗಳಿಸಿ ಮನೆಯೊಳಗೆ ಪ್ರವೇಶಿಸಿದ್ದಾನೆ. ಒಳಗೆ ಹೋದ ತಕ್ಷಣವೇ ಆತ ಮಹಿಳೆಯ ಮೇಲೆ ಲೈಂಗಿಕ ದಾಳಿಗೆ ಮುಂದಾಗಿದ್ದಾನೆ.
ಸಂತ್ರಸ್ತೆ ತನ್ನ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ಮನವಿ ಮಾಡಿಕೊಂಡರೂ, ಆರೋಪಿಯು ಯಾವುದೇ ಕರುಣೆ ತೋರದೇ, ಆಕೆಯ ಕುತ್ತಿಗೆಗೆ ಸ್ಕಾರ್ಫ್‌ನಿಂದ ಬಿಗಿದು, ಕತ್ತಿ ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ನಂತರವೂ ಕ್ರೂರತೆಯನ್ನು ಮುಂದುವರಿಸಿ, ಮಹಿಳೆಯನ್ನು ಅಮಾನುಷವಾಗಿ ಹಿಂಸಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆ ಬೆಳಕಿಗೆ ಬಂದಿದ್ದು ಹೇಗೆ?
ಮಹಿಳೆಯ ಜೊತೆ ವಾಸವಿದ್ದ ಸೋದರಳಿಯನು ಪರೀಕ್ಷೆ ಮುಗಿಸಿ ತನ್ನ ಪೋಷಕರ ಮನೆಗೆ ಹೋಗಿದ್ದನು. ಸಾಯಂಕಾಲ ಅತ್ತೆಗೆ ಕರೆ ಮಾಡಿದಾಗ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಅನುಮಾನಗೊಂಡು ಸಂಬಂಧಿಕರನ್ನು ಮನೆಗೆ ಕಳುಹಿಸಿದ್ದಾನೆ. ಅವರು ಮನೆಗೆ ತೆರಳಿ ನೋಡಿದಾಗ ಮಹಿಳೆ ರಕ್ತದ ಮಡುವಿನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದಾರೆ.
ತಕ್ಷಣವೇ ಅವರನ್ನು ನರಸರಾವ್ ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ಪ್ರಕಾರ ಸದ್ಯ ಮಹಿಳೆಯ ಆರೋಗ್ಯ ಸ್ಥಿರವಾಗಿದೆ.
ಪೊಲೀಸ್ ಕ್ರಮ:
ಈ ಸಂಬಂಧ ಮಾಚೆರ್ಲಾ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪತ್ತೆಹಚ್ಚಲು ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಪಟ್ಟಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಕಾರ್ಯ ನಡೆಯುತ್ತಿದ್ದು, ಆರೋಪಿಗಾಗಿ ಹುಡುಕಾಟ ಮುಂದುವರಿದಿದೆ.
ಹುಬ್ಬಳ್ಳಿ ನಗರವನ್ನು ಬೆಚ್ಚಿಬೀಳಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಮ್ ಟ್ರೈನರ್ ಸಮೀರ್‌ನ ಕರಾಳ ಕೃತ್ಯಗಳು ಹಂತ ಹಂತವಾಗಿ ಬಹಿರಂಗವಾಗುತ್ತಿವೆ.…
ಉತ್ತರ ಕರ್ನಾಟಕ ಅಂದಾಗ ನೆನಪಾಗುವುದು ಅದರ ವಿಶೇಷ ಆಹಾರ, ಬಯಲು ಸೀಮೆಯ ಸುಂದರ ಪ್ರಕೃತಿ ಮತ್ತು ಮುಖ್ಯವಾಗಿ ಜೀವಂತವಾಗಿರುವ ನಾಟಕ…
ಬೆಂಗಳೂರು: ಆನ್‌ಲೈನ್ ಬೈಕ್ ಟ್ಯಾಕ್ಸಿ ಸೇವೆಯಾದ ರಾಪಿಡೋ ಮೂಲಕ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೈಕ್…
ಹುಬ್ಬಳ್ಳಿಯಲ್ಲಿ ಮುಸ್ಲಿಂ ಜಿಮ್ ಟ್ರೈನರ್ ವಿರುದ್ಧ ಹಿಂದೂ ಯುವತಿಯರೊಂದಿಗೆ ‘ಲವ್ ಜಿಹಾದ್’ ನಡೆಸಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಎರಡು…
ರಾಜಧಾನಿ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್ಲಿ ಕ್ಷುಲ್ಲಕ ವಿಚಾರದಿಂದ ಆರಂಭವಾದ ದಂಪತಿಗಳ ಜಗಳ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ…
ಹಳಿಯಾಳ ತಾಲೂಕಿನ ಉಪ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜೈಲರ್ ವಿರುದ್ಧ ಲಂಚ ಬೇಡಿಕೆಯ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕ…