Latest

ನೀರು ಕೇಳಿದ ನೆಪದಲ್ಲಿ ಅತ್ತೆ-ಸೊಸೆಗೆ ಚಾಕು ಇರಿದು ಲೂಟಿ ಮಾಡಿದ ಕಳ್ಳ.!

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಸೋಮವಾರ ಸಂಜೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಮನೆಯ ಬಳಿ ನೀರು ಕೇಳಿದ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬನು ಅತ್ತೆ ಹಾಗೂ ಸೊಸೆಯ ಮೇಲೆ ಚಾಕು ದಾಳಿ ನಡೆಸಿ ಬೆಳ್ಳಿ ಸರಗಳನ್ನು ಲೂಟಿ ಮಾಡಿದ್ದಾನೆ.

ಪ್ರಾಥಮಿಕ ಮಾಹಿತಿಯಂತೆ, ಮನುಷ್ಯತ್ವ ಮರೆತ ಆರೋಪಿ ಮುನಾವರ್ ಎಂಬಾತ, ಮನೆಯವರಿಗೆ ನೀರು ಕೇಳಿ ಭರವಸೆ ಹುಟ್ಟುಹಾಕಿದ. ಮಹಿಳೆಯರು ನೀರು ತರಲು ಹೊರಟಂತೆಯೇ, ಮುನಾವರ್ ಆಕೆಯ ಮೇಲೆ ಏಕಾಏಕಿ ಚಾಕು ಇರಿ­ದು ಬೆದರಿಕೆ ಹಾಕಿ ಗಲಭೆ ಸೃಷ್ಟಿಸಿ ಬೆಳ್ಳಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಆರೋಪಿಯ ಚಳನವಳಿಗಳನ್ನು ಅನುಮಾನಗೊಂಡ ಸ್ಥಳೀಯರು ತಕ್ಷಣ ಬೆನ್ನಟ್ಟಿ ಹೊಡೆದು ಹಿಡಿದು ಪೊಲೀಸರು ಬಾಗಿಲಿಗೆ ಒಪ್ಪಿಸಿದ್ದಾರೆ. ಈ ಘಟನೆಯ ನಂತರ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದು, ಮತ್ತಷ್ಟು ಮಾಹಿತಿಗಾಗಿ ವಿಚಾರಣೆ ಮುಂದುವರಿದಿದೆ.

ನ್ಯಾಯ ನೀಡುವಂತೆ ಗ್ರಾಮಸ್ಥರ ಒತ್ತಾಯ.
ಘಟನೆಯ ಬಳಿಕ ಗ್ರಾಮಸ್ಥರು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರ ಬಳಿ ಒತ್ತಾಯಿಸಿದ್ದಾರೆ. ಮಹಿಳೆಯರ ಭದ್ರತೆಗಾಗಿ ನಿರಂತರ ಪಾರುಪತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಅವರ ಬೇಡಿಕೆ.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

23 hours ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

24 hours ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

24 hours ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

24 hours ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

2 days ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

2 days ago