Categories: LatestPolitics

ಅಂಚೆ ಮತಗಳ ಮರುಎಣಿಕೆಯಲ್ಲಿ ತಿರುವು – ಶೃಂಗೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು

ಹೈಕೋರ್ಟ್ ನಿರ್ದೇಶನದಂತೆ ನಡೆದ ಅಂಚೆ ಮತಗಳ ಮರುಎಣಿಕೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ಭಾನುವಾರ ತಡರಾತ್ರಿ ಅಧಿಕೃತವಾಗಿ ಪ್ರಕಟಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಆರಂಭಿಕ ಫಲಿತಾಂಶ ಹೊರಬಂದಾಗ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಜಯಶಾಲಿಯಾಗಿದ್ದರು. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂಬಂಧ ಅಂದಿನ ಜಿಲ್ಲಾಧಿಕಾರಿ ರಮೇಶ್ ಮತ್ತು ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧವೂ ದೂರು ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಅಂಚೆ ಮತಗಳನ್ನು ಮರುಎಣಿಸಲು ಆದೇಶ ನೀಡಿತ್ತು.

ಶನಿವಾರ ತಡರಾತ್ರಿವರೆಗೆ ನಡೆದ ಮರುಎಣಿಕೆಯಲ್ಲಿ ಫಲಿತಾಂಶ ಸಂಪೂರ್ಣವಾಗಿ ಬದಲಾಗಿದೆ. ಜೀವರಾಜ್ ಅವರಿಗೆ 2023ರಲ್ಲಿ ಲಭಿಸಿದ್ದ 692 ಅಂಚೆ ಮತಗಳಲ್ಲಿ ಕೇವಲ 2 ಮತಗಳ ಇಳಿಕೆಯಾಗಿದ್ದು, ಈಗ ಅವರ ಸಂಖ್ಯೆ 690ಕ್ಕೆ ತಲುಪಿದೆ.

ಇನ್ನೊಂದೆಡೆ, ರಾಜೇಗೌಡ ಅವರು ಮೊದಲು ಪಡೆದಿದ್ದ 569 ಅಂಚೆ ಮತಗಳಲ್ಲಿ 255 ಮತಗಳು ಅಮಾನ್ಯಗೊಂಡಿದ್ದು, ಅವರ ಮತಗಳ ಸಂಖ್ಯೆ 314ಕ್ಕೆ ಕುಸಿದಿದೆ. ಈ ಭಾರಿ ವ್ಯತ್ಯಾಸವೇ ಅಂತಿಮ ಫಲಿತಾಂಶವನ್ನು ಬದಲಿಸಿ, ಜೀವರಾಜ್ ಅವರಿಗೆ 52 ಮತಗಳ ಮುನ್ನಡೆ ಒದಗಿಸಿದೆ.

ಚುನಾವಣಾ ಆಯೋಗದ ಘೋಷಣೆಯ ಬಳಿಕ ಜೀವರಾಜ್ ಅವರು ಶೀಘ್ರದಲ್ಲೇ ವಿಧಾನಸಭೆಯಲ್ಲಿ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಇತ್ತ, ಈ ತೀರ್ಪಿನ ವಿರುದ್ಧ ಕಾನೂನು ಹೋರಾಟ ಮುಂದುವರಿಸುವುದಾಗಿ ಮತ್ತು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಟಿ.ಡಿ. ರಾಜೇಗೌಡ ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ರೈಲ್ವೇ ನಿಲ್ದಾಣದಲ್ಲಿ ಪತಿಯ ಕಣ್ಣೆದುರೇ ಪ್ರಿಯಕರನನ್ನು ತಬ್ಬಿದ ಇಬ್ಬರು ಮಕ್ಕಳ ತಾಯಿ! 20 ವರ್ಷದ ಯುವಕನ ಜೊತೆ ಹೋಗುತ್ತೇನೆಂದು ಹಠ.

ವಾರಣಾಸಿ (ಉತ್ತರ ಪ್ರದೇಶ): ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ 20 ವರ್ಷದ ಪ್ರಿಯಕರನೊಂದಿಗೆ ಹೋಗುವುದಾಗಿ ಪತಿಯ ಎದುರೇ ಹಠ ಹಿಡಿದು,…

7 hours ago

ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸ್‌ ಹಸ್ತಕ್ಷೇಪ: ಮಂಗಳೂರು ತನಿಖಾಧಿಕಾರಿಗೆ ಹೈಕೋರ್ಟ್‌ ತೀವ್ರ ಚಾಟಿ

ಮಂಗಳೂರು: ಸಿವಿಲ್‌ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ…

8 hours ago

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

16 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

16 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

1 day ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago