Latest

ಮಗಳ ಮೇಲೆ ಲೈಂಗಿಕ ದೌರ್ಜನ್ಯದ ಬೆದರಿಕೆ ಹಾಕಿದ ಪತಿಯನ್ನು ಮುಗಿಸಿದ ಪತ್ನಿ.

ಮದ್ಯವ್ಯಸನಿಯಾಗಿದ್ದ ತಂದೆ ತನ್ನ ಮಗಳ ಮೇಲೆ ಅತ್ಯಾಚಾರವೆಸಗುವುದಾಗಿ ಬೆದರಿಕೆ ಹಾಕಿದ್ದಕ್ಕೆ ಮಹಿಳೆಯೊಬ್ಬರು ತನ್ನ ಪತಿಯನ್ನೇ ಕೊಲೆ ಮಾಡಿರುವ ಘಟನೆ ಝಾನ್ಸಿಯಲ್ಲಿ ನಡೆದಿದೆ. ಕೊಲೆಯಲ್ಲಿ ಭಾಗಿಯಾಗಿರುವ ಆರೋಪಿ ಮಹಿಳೆ ಮತ್ತು ಆಕೆಯ ಮಗಳ ವಿರುದ್ಧ ಐಪಿಸಿ ಸೆಕ್ಷನ್​ 304ರ ಕೆಳಗೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆಕೆಯ ಪತಿ ಪಾಣಿಪತ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದ. ‘ನನ್ನ ಪತಿ ಮದುವೆಗೆ ಹಾಜರಾಗಲು ಹೋಗಿ ಕಂಠ ಪೂರ್ತಿ ಕುಡಿದು ಮನೆಗೆ ಮರಳಿದ್ದರು. ನಂತರ ಅವರು ನನ್ನೊಂದಿಗೆ ಜಗಳವಾಡಿ ನನ್ನ ಮೇಲೆ ಹಲ್ಲೆಗೆ ಯತ್ನಿಸಿದರು. ಇದನ್ನು ನೋಡಿದ ನನ್ನ ಹದಿಹರೆಯದ ಮಗಳು ಜಗಳ ನಿಲ್ಲಿಸಲು ಮಧ್ಯಪ್ರವೇಶಿಸಿದ್ದಾಳೆ. ಆಗ ಆಕೆಯ ಮೇಲೆ ಅತ್ಯಾಚಾರ ಮಾಡುವುದಾಗಿ ಪತಿ ಬೆದರಿಕೆ ಹಾಕಿದರು’ ಎಂದು ಮಹಿಳೆ ಆರೋಪಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ತಾಯಿ ಮತ್ತು ಮಗಳು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಪತಿರಾಯ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಕಾಶೀರಾಮ್​ ಎಂದು ಗುರುತಿಸಲಾಗಿದೆ. ಆತನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago