Latest

ವಿಜಯಪುರದಲ್ಲಿ ನಾಲ್ವರು ಮಕ್ಕಳ ಜೋತೆ ಕಾಲುವೆಗೆ ಜಿಗಿದ ಮಹಿಳೆ: ಕಂದಮ್ಮಗಳು ಸಾವು..

ವಿಜಯಪುರ: ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ.
ಗಂಡ ಹೆಂಡತಿಯ ಜಗಳ ಮಧ್ಯದಲ್ಲಿ 4 ಮಕ್ಕಳ ಜೀವ ಹೋಗಿದ್ದು ನಿಜಕ್ಕೂ ಮನಕಲಕುವ ಘಟನೆ,
ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸನ್ ನಿಂಗರಾಜ ಭಜಂತ್ರಿ ಹಾಗೂ ಹುಸೇನ್ ನಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳಿಯರು ಕಾಪಾಡಿದ್ದಾರೆ. ಕೌಟುಂಬಿಕ ಕಾರಣವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಬಹುದಿನಗಳಿಂದ ಭಾಗ್ಯಳ ಪತಿ ನಿಂಗರಾಜ ಅಣ್ಣತಮ್ಮಂದಿರ ಮಧ್ಯೆ ಆಸ್ತಿಗಾಗಾಗಿ ಕಲಹ ನಡೆದಿತ್ತು. ಆಸ್ತಿಯಲ್ಲಿ ಬಿಡಿಗಾಸು ಕೊಡಲ್ಲ ಅಂತಾ ಲಿಂಗರಾಜ್‌ಗೆ ಅಣ್ಣತಮ್ಮಂದಿರು ಹೇಳಿದ್ದರು. ಅದೆ ರೀತಿ ಇಂದು ಕೂಡ ಪರಸ್ಪರ ಗಲಾಟೆ ನಡೆದಿತ್ತು. ಗಲಾಟೆಯ ನಂತರ ಮನೆಯಿಂದ ತೆಲಗಿಗೆ ಹೊರಟಾಗ ಕಾಲುವೆ ಹತ್ತಿರ ನಿಂಗರಾಜನ ದ್ವಿಚಕ್ರ ವಾಹನದ ಪೆಟ್ರೋಲ್ ಖಾಲಿ ಆಗಿದೆ. ಆಗ ಪೆಟ್ರೋಲ್ ತರಲೆಂದು ನಿಂಗರಾಜ ಸ್ವಲ್ಪ ದೂರ ಹೋಗುತ್ತಿದ್ದಂತೆ ಭಾಗ್ಯ ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದಾಳೆ ಎಂದು ಪತಿ ನಿಂಗರಾಜ ಕಣ್ಣೀರು ಹಾಕುತ್ತಿದ್ದಾನೆ. ನಿಂಗರಾಜ ಹಾಲಿ ತೆಲಗಿ ಗ್ರಾಮ ಪಂ ಸದಸ್ಯನಾಗಿದ್ದು, ಮೊಹರಂನಲ್ಲಿ ದೇವರನ್ನು ಹೊರುತ್ತಿದ್ದರು. ಈ ಕಾರಣದಿಂದ ಗಂಡು ಮಕ್ಕಳಿಗೆ ಹಸೇನ್‌ ಹಾಗೂ ಹುಸೇನ್‌ ಎಂದು ಹೆಸರಿಡಲಾಗಿದೆ.
ಸದ್ಯ ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಮೀನುಗಾರರು ಹೊರತೆಗೆದಿದ್ದಾರೆ. ಇಬ್ಬರು ಗಂಡು ಮಕ್ಕಳ ಶವಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಶವ ಶೋಧಕಾರ್ಯ ಮುಂದುವರಿದಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಿ: ದಾವಲಸಬ್. ಬನ್ನೇಟ್ಟಿ

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

10 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

12 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

23 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

24 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

24 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago